ಜನ ಮನದ ನಾಡಿ ಮಿಡಿತ

Advertisement

ಕಡಬ: ಸ್ನಾನಕ್ಕೆಂದು ನದಿಗೆ ಇಳಿದ ಯುವಕ ಮೃತ್ಯು..!

ಸ್ನಾನಕ್ಕೆಂದು ನದಿಗೆ ಇಳಿದ ಯುವಕನೊಬ್ಬ ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದು, ಮೃತದೇಹ ಪತ್ತೆಯಾಗಿದೆ. ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಕೊರಿಯರ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

ನಾಪತ್ತೆಯಾದ ಯುವಕನನ್ನು ಮಂಜು ಅವರ ಪುತ್ರ ರಕ್ಷಿತ್ ಎಂದು ಗುರುತಿಸಲಾಗಿದೆ. ಮೂಲತಃ ಮರ್ದಾಳ ನಿವಾಸಿಯಾಗಿರುವ ರಕ್ಷಿತ್ ಕುಟುಂಬದವರೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಿದ್ದು, ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ತನ್ನ ಸ್ನೇಹಿತರ ಗುಂಪಿನೊಂದಿಗೆ ಐತ್ತೂರು ಗ್ರಾಮದ `ಅರಬ್ಬಿ ತೋಡು’ ಪ್ರದೇಶಕ್ಕೆ ಸ್ನಾನಕ್ಕಾಗಿ ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಈಜಲು ತಿಳಿದಿದ್ದರೂ, ನೀರಿನ ಸೆಳೆತ ಅಥವಾ ಆಳದ ಅಂದಾಜು ತಪ್ಪಿದ್ದರಿಂದ ರಕ್ಷಿತ್ ನೀರಲ್ಲಿ ಮುಳುಗಿ ನಾಪತ್ತೆಯಾಗಿದ್ದಾರೆ. ಘಟನೆ ನಡೆದ ತಕ್ಷಣ ಸ್ನೇಹಿತರು ಹಾಗೂ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಮಾಹಿತಿ ತಿಳಿದ ಕೂಡಲೇ ಕಡಬ ಪೊಲೀಸರು ಹಾಗೂ ಪುತ್ತೂರಿನಿಂದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಸ್ಥಳೀಯರ ಸಹಕಾರದೊಂದಿಗೆ ನಾಪತ್ತೆಯಾದ ಯುವಕನಿಗಾಗಿ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.

ರಾತ್ರಿ ವೇಳೆ ಖ್ಯಾತ ಮುಳುಗು ತಜ್ಞ ಈಶ್ವರ್ ಮಲ್ಪೆ ಮತ್ತು ಅವರ ತಂಡ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ಮುಂದುವರಿಸಿದ್ದು, ನದಿಯ ಸುಮಾರು 30 ಅಡಿ ಆಳದಲ್ಲಿ ಸಿಲುಕಿಕೊಂಡಿದ್ದ ರಕ್ಷಿತ್ ಅವರ ಮೃತದೇಹವನ್ನು ತಂಡವು ಹೊರತೆಗೆಯುವಲ್ಲಿ ಯಶಸ್ವಿಯಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಘಟನೆಯ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!