ಜನ ಮನದ ನಾಡಿ ಮಿಡಿತ

Advertisement

ಜಕಾರ್ತಾ: ಇಂಡೋನೇಷ್ಯಾದ ಜಕಾರ್ತಾ ಹೊರವಲಯದಲ್ಲಿ ಎರಡು ರೈಲುಗಳ ನಡುವೆ ಭೀಕರ ಅಪ*ಘಾತ..!

ಎರಡು ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, 81 ಮಂದಿ ಗಾಯಗೊಂಡಿರುವ ಘಟನೆ ಇಂಡೋನೇಷ್ಯಾದ ಜಕಾರ್ತಾ ಹೊರವಲಯದಲ್ಲಿ ತಡರಾತ್ರಿ ನಡೆದಿದೆ.

ಜಕಾರ್ತಾ-ಬೆಕಾಸಿ ಮಾರ್ಗದಲ್ಲಿ ಚಲಿಸುತ್ತಿದ್ದ ಸ್ಥಳೀಯ ಕಮ್ಯುಟರ್ ರೈಲಿಗೆ, ಜಕಾರ್ತಾ-ಸುರಬಾಯಾ ಮಾರ್ಗದ ದೂರದ ಪ್ರಯಾಣದ ರೈಲು ಹಿಂದಿನಿಂದ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಇನ್ನೂ ಹಲವು ಪ್ರಯಾಣಿಕರು ರೈಲಿನೊಳಗೆ ಸಿಲುಕಿಕೊಂಡಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಹಳಿ ದಾಟುತ್ತಿದ್ದ ಟ್ಯಾಕ್ಸಿಯೊಂದು ಕಮ್ಯುಟರ್ ರೈಲಿಗೆ ಡಿಕ್ಕಿ ಹೊಡೆದ ಕಾರಣ ಆ ರೈಲು ಹಳಿಯ ಮೇಲೆ ನಿಂತಿತ್ತು. ಅದೇ ಹಳಿಯಲ್ಲಿ ವೇಗವಾಗಿ ಬಂದ ದೂರದ ಪ್ರಯಾಣದ ರೈಲು, ನಿಂತಿದ್ದ ರೈಲಿನ ಮಹಿಳಾ ಬೋಗಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ರೈಲಿನ ಬೋಗಿಗಳು ಜಖಂಗೊಂಡು 7 ಮಂದಿ ಮೃತಪಟ್ಟಿದ್ದಾರೆ. ಅಪಘಾತದ ತೀವ್ರತೆಗೆ ರೈಲಿನ ಬೋಗಿಗಳು ನಜ್ಜುಗುಜ್ಜಾಗಿದ್ದು, ಅವಶೇಷಗಳಡಿ ಸಿಲುಕಿದ್ದ ಪ್ರಯಾಣಿಕರನ್ನು ಹೊರತೆಗೆಯಲು ರಕ್ಷಣಾ ಸಿಬ್ಬಂದಿ ಗ್ಯಾಸ್ ಕಟ್ಟರ್ ಮತ್ತು ಆಧುನಿಕ ಉಪಕರಣಗಳನ್ನು ಬಳಸುತ್ತಿದ್ದಾರೆ. ಇಂಡೋನೇಷ್ಯಾದ ರಾಷ್ಟ್ರೀಯ ಸಾರಿಗೆ ಸುರಕ್ಷತಾ ಸಮಿತಿ ಅಪಘಾತದ ತನಿಖೆ ನಡೆಸುತ್ತಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!