ಜನ ಮನದ ನಾಡಿ ಮಿಡಿತ

Advertisement

ರಾಯಚೂರು : ಅಪ್ರಾಪ್ತ ಬಾಲಕಿಯನ್ನು ಕರೆದೊಯ್ಯುತ್ತಿದ್ದ ವೇಳೆ ಯುವಕರನ್ನು ಪ್ರಶ್ನಿಸಿದ್ದ ವ್ಯಕ್ತಿಯ ಬರ್ಬರ ಹ*ತ್ಯೆ…!

 

ಪ್ರೀತಿ-ಪ್ರೇಮದ ನೆಪದಲ್ಲಿ ಅಪ್ರಾಪ್ತ ಬಾಲಕಿಯನ್ನು ಕರೆದೊಯ್ಯುತ್ತಿದ್ದ ವೇಳೆ ಯುವಕರನ್ನು ಪ್ರಶ್ನಿಸಿದ್ದ ವ್ಯಕ್ತಿಯನ್ನ ಬರ್ಬರವಾಗಿ ಹ*ತ್ಯೆ ಮಾಡಿದ ಘಟನೆ ರಾಯಚೂರು ಜಿಲ್ಲೆಯ ಯಾಪಲದಿನ್ನಿ ಗ್ರಾಮದಲ್ಲಿ ನಡೆದಿದೆ.

ಯಾಪಲದಿನ್ನಿ ಗ್ರಾಮದ ಈಶಪ್ಪ ಕೊಲೆಯಾದ ದುರ್ದೈವಿ. ಘಟನೆ ನಡೆದ ರಾತ್ರಿ ಈಶಪ್ಪ ತಮ್ಮ ಮನೆಯ ಮಾಳಿಗೆಯ ಮೇಲೆ ಮಲಗಿದ್ದರು. ಈ ವೇಳೆ ಅನ್ಯ ಧರ್ಮದ ಯುವಕ ಅಸ್ಲಂ ಮತ್ತು ಆತನ ಸ್ನೇಹಿತರು ಸೇರಿ 14 ವರ್ಷದ ಅಪ್ರಾಪ್ತ ಬಾಲಕಿಯನ್ನು ಕರೆದೊಯ್ಯುತ್ತಿರುವುದನ್ನು ಈಶಪ್ಪ ಗಮನಿಸಿದ್ದಾರೆ. ಅನ್ಯಕೋಮಿನ ಯುವಕರು ಕರೆದೊಯ್ಯುತ್ತಿರುವ ಅಪ್ರಾಪ್ತ ತನ್ನ ಸ್ನೇಹಿತ ಆಂಜನೇಯನ ತಮ್ಮನ ಮಗಳಾಗಿದ್ದರಿಂದ, ಈಶಪ್ಪ ತಕ್ಷಣ ಮಾಳಿಗೆಯಿಂದ ಕೆಳಗಿಳಿದು ಬಂದು ಯುವಕರನ್ನು ತಡೆದು, ‘ಬಾಲಕಿಯನ್ನು ಎಲ್ಲಿಗೆ ಕರೆದೊಯ್ಯುತ್ತಿದ್ದೀರಿ?’ ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ತಮ್ಮ ಕೃತ್ಯಕ್ಕೆ ಅಡ್ಡಿಯಾದ ಈಶಪ್ಪನ ಮೇಲೆ ಆಕ್ರೋಶಗೊಂಡ ಅಸ್ಲಂ ಮತ್ತು ಆತನ ಗ್ಯಾಂಗ್, ಹಗ್ಗ ಅಥವಾ ವೈರ್‌ನಿಂದ ಈಶಪ್ಪನ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ಕೃತ್ಯ ಎಸಗಿದ ಬಳಿಕ ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕನಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

error: Content is protected !!