ಜನ ಮನದ ನಾಡಿ ಮಿಡಿತ

Advertisement

ಪುತ್ತೂರು : ಕಾರು ಮತ್ತು ಬೈಕ್ ನಡುವೆ ಡಿಕ್ಕಿ…!

 

ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟು ಸಹ ಸವಾರೆ ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ ಸಮೀಪದ ಗೋಳಿತ್ತೊಟ್ಟು ಜಂಕ್ಷನ್‌ನಲ್ಲಿ ನಡೆದಿದೆ.

ಮೃತರನ್ನು ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿ ನಿವಾಸಿ ಸದಾನಂದ ಆಚಾರ್ಯ ಎಂದು ಗುರುತಿಸಲಾಗಿದೆ. ಇವರು ಅರಸಿನಮಕ್ಕಿಯ ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉದ್ಯೋಗಿಯಾಗಿದ್ದರು. ಬೈಕ್‌ನಲ್ಲಿ ಹಿಂಬದಿ ಕುಳಿತಿದ್ದ ಅವರ ಪತ್ನಿ ಉಷಾ ಅವರು ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದಂಪತಿ ಅರಸಿನಮಕ್ಕಿಯಿಂದ ಕೊಕ್ಕಡ ಮಾರ್ಗವಾಗಿ ಉಪ್ಪಿನಂಗಡಿಗೆ ಪ್ರಯಾಣಿಸುತ್ತಿದ್ದರು. ಗೋಳಿತ್ತೊಟ್ಟು ಬಳಿ ರಾಷ್ಟ್ರೀಯ ಹೆದ್ದಾರಿಗೆ ಇವರು ಪ್ರವೇಶಿಸುತ್ತಿದ್ದಂತೆಯೇ, ಉಪ್ಪಿನಂಗಡಿಯಿಂದ ಶಿರಾಡಿ ಕಡೆಗೆ ಚಲಿಸುತ್ತಿದ್ದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಸದಾನಂದ ಆಚಾರ್ಯ ಅವರು ಘಟನಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈಸಂಬಂಧ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

 

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!