ಸಾರಡ್ಕ ಚೆಕ್ ಪೋಸ್ಟ್ ನಲ್ಲಿ ಪಿಕಪ್ ವಾಹನದಲ್ಲಿ ಕೇರಳಕ್ಕೆ ಸಾಗಿಸುತ್ತಿದ್ದ 3 ಗೋವುಗಳನ್ನು ವಿಟ್ಲ ತಾಲೂಕು ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ತಡೆದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಇಂದು ಸಂಜೆ ಕರ್ನಾಟಕ ದಿಂದ ಕೇರಳಕ್ಕೆ ಪಿಕಪ್ ವಾಹನದಲ್ಲಿ ಕೇರಳಕ್ಕೆ 3 ಗೋವುಗಳನ್ನು ಒಂದೇ ಪಿಕಪ್ ನಲ್ಲಿ ಸಾಗಿಸುವ ಖಚಿತ ಮಾಹಿತಿ ಪಡೆದ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಮತ್ತು ಸ್ಥಳೀಯರು ಸಾರಡ್ಕ ಚೆಕ್ ಪೋಸ್ಟ್ ನಲ್ಲಿ ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ. ಗೋವುಗಳನ್ನು ರಕ್ಷಣೆ ಮಾಡಿದ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರಿಗೆ ಮತ್ತು ಸ್ಥಳೀಯರಿಗೆ ಗ್ರಾಮಸ್ತರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.




