ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಮೀಪ ಪಾದಚಾರಿಗಳಿಗೆ ಅಪಾಯ..!

ಮಂಗಳೂರು ನಗರದ ಲಾಲ್‌ಬಾಗ್‌ನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಮೀಪ ಪಾದಚಾರಿ ಮಾರ್ಗದ ಬದಿಯಲ್ಲೇ ಕಡಿಮೆ ಎತ್ತರದಲ್ಲಿ ಅಳವಡಿಸಲಾಗಿರುವ ಟ್ರಾನ್ಸ್ಫಾರ್ಮರ್ ಹಾಗೂ ಅದಕ್ಕೆ ಸಂಬಧಿಸಿದ ಹೈ ವೋಲ್ಟೇಜ್, ಲೋ ವೋಲ್ಟೇಜ್ ವಿದ್ಯುತ್ ಕೇಬಲ್‌ಗಳು ಇದ್ದು ಇದು ಅಪಾಯಕ್ಕೆ ಆಹ್ವಾನವನ್ನು ನೀಡುವಂತಿವೆ.

ಮುಂಗಾರು ಸಮೀಪಿಸುತ್ತಿರುವ ಸಂದರ್ಭದಲ್ಲಿ ವಿದ್ಯುತ್ ಅವಘಡ ಸಂಭವಿಸುವ ಭೀತಿ ಹೆಚ್ಚಿದ್ದು, ಪ್ರತಿನಿತ್ಯ ಆ ಭಾಗದಲ್ಲಿ ಸಂಚರಿಸುವ ಪಾದಚಾರಿಗಳು ಹಾಗೂ ವಿದ್ಯಾರ್ಥಿಗಳ ಸುರಕ್ಷತೆ ಪ್ರಶ್ನಾರ್ಥಕವಾಗಿದೆ. ಅಪಾಯದ ಸೂಚನಾ ಫಲಕಗಳು ಅಥವಾ ಮುನ್ನೆಚ್ಚರಿಕಾ ವ್ಯವಸ್ಥೆಗಳು ಅಲ್ಲಿ ಇಲ್ಲದಿರುವುದು ಅಪಾಯಕ್ಕೆ ಆಸ್ಪದವನ್ನು ನೀಡುತ್ತದೆ. ವಿದ್ಯುತ್ ಸಾಧನಗಳು ಪಾದಚಾರಿ ಮಾರ್ಗಕ್ಕೆ ಅತೀ ಸಮೀಪದಲ್ಲಿರುವುದರಿಂದ ಯಾವುದೇ ಕ್ಷಣದಲ್ಲಿ ಅಪಾಯ ಸಂಭವಿಸುವ ಸಾಧ್ಯತೆ ಇದೆ.

ತಕ್ಷಣವೇ ಸಂಬಂಧಿತ ಇಲಾಖೆ ಹಾಗೂ ಸ್ಥಳೀಯ ಆಡಳಿತ ಎಚ್ಚೆತ್ತುಕೊಂಡು ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಮುಂದೆ ನಡೆಯಬಹುದಾದ ಅಪಾಯವನ್ನು ತಡೆಗಟ್ಟಬೇಕು ಎಂಬುದು ಸಾರ್ವಜನಿಕ ಕಳಕಳಿಯಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!