ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಉಡುಪಿ ಜಿಲ್ಲೆಯಾದ್ಯಂತ ರಾಷ್ಟ್ರೀಯ ಹೆದ್ದಾರಿಯಲ್ಲಿ ಆರು ಕಡೆಗಳಲ್ಲಿ ಅತ್ಯಾಧುನಿಕ ಸ್ಪೀಡ್ ರಾಡಾರ್ ಕ್ಯಾಮರಾಗಳನ್ನು ಅಳವಡಿಸಲಾಗಿದೆ.

ಇವುಗಳ ಮೂಲಕ ಸಂಚಾರ ನಿಯಮಗಳನ್ನು ಉಲ್ಲಂಘಿಸುವ ವಾಹನಗಳನ್ನು ಜಿಲ್ಲಾ ನಿಯಂತ್ರಣ ಕೊಠಡಿಗಳಲ್ಲಿ ಮಾನಿಟರ್ ಮಾಡಿ ನಿಯಮ ಉಲ್ಲಂಘನೆಗಳಿಗೆ ಸಂಬ0ಧಿಸಿದ ಚಲನ್ಗಳನ್ನು ಪೋಸ್ಟ್ ಮೂಲಕ ಕಳುಹಿಸಲಾಗುತ್ತದೆ ಎಂದು ಎಸ್ಪಿ ಹರಿರಾಮ್ ಶಂಕರ್ ತಿಳಿಸಿದ್ದಾರೆ. ಸದ್ಯ ಆರು ಕಡೆಗಳಲ್ಲಿ ಸ್ಪೀಡ್ ರಾಡಾರ್ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಇನ್ನೂ 14 ಸ್ಥಳಗಳನ್ನು ಇದಕ್ಕಾಗಿ ಗುರುತಿಸಲಾಗಿದ್ದು, ಟೆಂಡರ್ ಪ್ರಕ್ರಿಯೆ ಮುಗಿದಿದೆ. ಶೀಘ್ರದಲ್ಲೇ ವರ್ಕ್ ಆರ್ಡರ್ ನೀಡಲಾಗುತ್ತದೆ. ಸದ್ಯ ಕಾರ್ಕಳದ ದೂಪದಕಟ್ಟೆ , ಪಡುಬಿದ್ರೆಯ ಉಚ್ಚಿಲ , ಕಾಪು ವಿನ ದಂಡತೀರ್ಥ ಶಾಲೆ ಬಳಿ , ಕೋಟದ ತೆಕ್ಕಟ್ಟೆ , ಗಂಗೊಳ್ಳಿಯ ತ್ರಾಸಿ ಹಾಗೂ ಬೈಂದೂರಿನ ನಾಯಕನಕಟ್ಟೆಗಳಲ್ಲಿ ಇವುಗಳನ್ನು ಅಳವಡಿಸಲಾಗಿದೆ ಎಂದು ಅವರು ಹೇಳಿದ್ದಾರೆ.



