ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಜಿಲ್ಲೆಯಾದ್ಯಂತ ಮುಸ್ಲಿಂ ಧರ್ಮಾನುಯಾಯಿಗಳಿಂದ ಬಕ್ರೀದ್ ಹಬ್ಬದ ಆಚರಣೆ

ಜಿಲ್ಲೆಯಾದ್ಯಂತ ಮುಸ್ಲಿಂ ಧರ್ಮಾನುಯಾಯಿಗಳು ಬಕ್ರೀದ್ ಹಬ್ಬವನ್ನು ಸಂಭ್ರಮ, ಸಡಗರದಿಂದ ಇಂದು ಆಚರಿಸಿದ್ದಾರೆ. ಉಡುಪಿ ನಗರ, ಕಾಪು, ಬ್ರಹ್ಮಾವರ, ಕುಂದಾಪುರ, ಬೈಂದೂರು, ಹೆಬ್ರಿ, ಕಾರ್ಕಳ ತಾಲೂಕುಗಳ ಎಲ್ಲ ಮಸೀದಿಗಳಲ್ಲಿ ವಿಶೇಷ ಈದ್ ನಮಾಝ್ ನೆರವೇರಿಸಲಾಯಿತು.

ಮುಸ್ಲಿಮರು ಬೆಳಗ್ಗೆ ಹೊಸ ಬಟ್ಟೆ ಧರಿಸಿ ಮಸೀದಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಕೆಲವು ಮಸೀದಿಗಳಲ್ಲಿ ಮಹಿಳೆಯರಿಗೂ ಈದ್ ನಮಾಝ್ ನಿರ್ವಹಿಸಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿತ್ತು. ನಮಾಝ್ ಬಳಿಕ ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.

ಉಡುಪಿ ಜಾಮೀಯ ಮಸೀದಿಯಲ್ಲಿ ಮೌಲಾನಾ ಅಬ್ದುರ ರಶೀದ್ ನದ್ವಿ ನೇತೃತ್ವದಲ್ಲಿ ಮತ್ತು ಉಡುಪಿ ಅಂಜುಮಾನ್ ಮಸೀದಿಯಲ್ಲಿ ಮೌಲಾನ ಇನಾಯುತುಲ್ಲಾ ರಝ್ವಿ ನೇತೃತ್ವದಲ್ಲಿ ಈದ್ ನಮಾಝ್ ನಿರ್ವಹಿಸಲಾಯಿತು. ಉಡುಪಿ ಜಿಲ್ಲಾ ಸಂಯುಕ್ತ ಜಮಾತಿನ ಕೇಂದ್ರ ಮಸೀದಿಯಾದ ಮೂಳೂರು ಜುಮಾ ಮಸೀದಿಯಲ್ಲಿ ಖತೀಬ್ ಹಾಫಿಲ್ ಮುಹಮ್ಮದ್ ಅಶ್ರಫ್ ಸಖಾಫಿ ನೇತೃತ್ವದಲ್ಲಿ ಈದ್ ವಿಶೇಷ ನಮಾಝ್ ಮತ್ತು ಖುತ್ಬಾ ಪಾರಾಯಣ ನಡೆಯಿತು.

ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ.ಗಪೂರ್ ಈದ್ ನಮಾಝ್ ನಲ್ಲಿ ಪಾಲ್ಗೊಂಡಿದ್ದಾರೆ. ಕುಂದಾಪುರ ಜುಮಾ ಮಸೀದಿಯಿಂದ ಬೆಳಗ್ಗೆ ಈದ್ ಮೆರವಣಿಗೆ ಹೊರಟು, ಕುಂದಾಪುರ ಈದ್ಗಾ ಮೈದಾನದಲ್ಲಿ ಈದ್ ವಿಶೇಷ ನಮಾಝ್ ನೆರವೇರಿಸಲಾಯಿತು. ಬ್ರಹ್ಮಗಿರಿ ನಾಯರ್‌ಕೆರೆಯ ಹಾಶಿಮಿ ಮಸೀದಿಯ ಇಮಾಮ್ ಒಬೇದುರ ರಹ್ಮಾನ್ ನದ್ವಿ ಈದ್ ವಿಶೇಷ ನಮಾಝ್ ನಿರ್ವಹಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!