ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಪೊಳಲಿಯಲ್ಲಿ ವ್ಯಕ್ತಿ ಸಾವು ವಾರಸುದಾರರಿಗಾಗಿ ಮನವಿ…!

 

ಪೊಳಲಿಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಇವರ ವಾರಸುದಾರರಿದ್ದಲ್ಲಿ ಪೊಲೀಸ್ ಠಾಣೆ ಸಂಪರ್ಕ ಮಾಡುವಂತೆ ಕೋರಲಾಗಿದೆ. ಒಂಟಿಯಾಗಿ ವಾಸಿಸುತ್ತಿದ್ದ ಡೊಂಬಯ್ಯ ಮೃತಪಟ್ಟವರು.

ಶ್ರೀ ರಾಜ ರಾಜೇಶ್ವರಿ ದೇವಸ್ಥಾನದ ವಠಾರದಲ್ಲಿ ಕಳೆದ 7-8 ವರ್ಷದಿಂದ ಓಡಾಡಿಕೊಂಡು ಕೂಲಿ ಕೆಲಸ ಮಾಡಿ, ದೇವಸ್ಥಾನದ ವಠಾರದಲ್ಲಿಯೇ ರಾತ್ರಿ ಉಳಿದುಕೊಂಡಿದ್ದ ಡೊಂಬಯ್ಯ ಎಂಬವದು ಇತ್ತೀಚೆಗೆ ಅನಾರೋಗ್ಯದ ಕಾರಣದಿಂದ ದೇವಸ್ಥಾನದ ಅನ್ನಛತ್ರದಲ್ಲಿ ಊಟ ಮಾಡಿಕೊಂಡು, ದೇವಸ್ಥಾನದ ವಠಾರದಲ್ಲಿ ಬಿಕ್ಷೆ ಬೇಡಿ ಜೀವನ ನಡೆಸುತಿದ್ದರು. ಡೊಂಬಯ್ಯ ಜೂನ್ 3ರಂದು ಮದ್ಯಾಹ್ನ ದೇವಸ್ಥಾನದ ವಠಾರದಲ್ಲಿರುವ ಪಂಪ್ ಶೆಡ್ಡಿನಲ್ಲಿ ಮಲಗಿದ ಸ್ಥಿತಿಯಲ್ಲಿ ಮೃತಪಟ್ಟಿದ್ದು, ಮೃತರ ವಾರಸುದಾರರು ಯಾರೆಂದು ಪತ್ತೆಯಾಗದೇ ಇದ್ದು, ಈ ಬಗ್ಗೆ ದೇವಸ್ಥಾನದ ಕಾರ್ಯನಿರ್ವಹಣಾ ಆಧಿಕಾರಿಯಾದ ಪುಟ್ಟಸ್ವಾಮಿ ಗೌಡರವರು ನೀಡಿರುವ ದೂರಿನ ಆಧಾರದಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರ ಹೆಸರು ಮತ್ತು ಪ್ರಾಯ ಆಸ್ಪತ್ರೆಯ ಚೀಟಿಯಿಂದ ತಿಳಿದು ಬಂದಿದ್ದು, ವಿಳಾಸ ಪತ್ತೆಯಾಗಿರುವುದಿಲ್ಲ. ಪ್ರಸ್ತುತ ಮೃತದೇಹವನ್ನು ಮೃತರ ವಾರಿಸುದಾರರ ಪತ್ತೆಯ ಬಗ್ಗೆ ಬಂಟ್ವಾಳ ತಾಲೂಕು ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದ್ದು, ಮೃತರ ವಾರಿಸುದಾರರು ಪತ್ತೆಯಾದಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ಸಂಪರ್ಕಿಸುವAತೆ ಸೂಚಿಸಲಾಗಿದೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!