ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ವಿಶ್ವ ಸೈಕಲ್ ದಿನಾಚರಣೆ-2026ರ ಅಂಗವಾಗಿ ‘ಸಂಡೇಸ್ ಆನ್ ಸೈಕಲ್’ ಸೈಕಲ್ ಜಾಥಾ ಆಯೋಜನೆ..!

ವಿಶ್ವ ಸೈಕಲ್ ದಿನಾಚರಣೆ-2026ರ ಅಂಗವಾಗಿ ಹಸಿರು ಭವಿಷ್ಯಕ್ಕಾಗಿ ಸೈಕ್ಲಿಂಗ್ ಎಂಬ ಧ್ಯೇಯವಾಕ್ಯದೊಂದಿಗೆ ಮೇರಾ ಯುವ ಭಾರತ, ದಕ್ಷಿಣ ಕನ್ನಡ ವತಿಯಿಂದ ಭವ್ಯ ‘ಸಂಡೇಸ್ ಆನ್ ಸೈಕಲ್’ ಸೈಕಲ್ ಜಾಥಾವನ್ನು ಆಯೋಜಿಸಲಾಯಿತು.

ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ ಮೇರಾ ಯುವ ಭಾರತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ವಿಶ್ವವಿದ್ಯಾಲಯದ ಎನ್‌ಎಸ್‌ಎಸ್, ಮಂಗಳೂರು ಸೈಕ್ಲಿಂಗ್ ಕ್ಲಬ್, ಸುರತ್ಕಲ್ ಬೀಚ್ ರನ್ನರ್ಸ್, ಫ್ರೀಜಿಂಗ್ ಸನ್ ಹಾಗೂ ವಿ.ಆರ್. ಸೈಕ್ಲಿಂಗ್ ಕ್ಲಬ್‌ಗಳ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಿತು.

ನಗರದ ಮಂಗಳಾ ಕ್ರೀಡಾಂಗಣದಿಂದ ಜಾಥಾಕ್ಕೆ ಚಾಲನೆ ನೀಡಿದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜಾ, ಆರೋಗ್ಯಕರ ಜೀವನಶೈಲಿ ಹಾಗೂ ಪರಿಸರ ಸಂರಕ್ಷಣೆಯಲ್ಲಿ ಸೈಕ್ಲಿಂಗ್ ಮಹತ್ವದ ಪಾತ್ರ ವಹಿಸುತ್ತದೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮೇರಾ ಯುವ ಭಾರತ ಉಪನಿರ್ದೇಶಕ ಉಲ್ಲಾಸ್ ಕೆ.ಟಿ.ಕೆ. ಮಾತನಾಡಿ, ಯುವಜನರು ಆರೋಗ್ಯ ಹಾಗೂ ರಾಷ್ಟ್ರ ನಿರ್ಮಾಣದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು. ಜಾಥಾದಲ್ಲಿ ಮಕ್ಕಳು, ಯುವಕರು, ಮಹಿಳೆಯರು ಹಾಗೂ ಹಿರಿಯ ನಾಗರಿಕರು ಸೇರಿದಂತೆ ನೂರಾರು ಮಂದಿ ಭಾಗವಹಿಸಿ ಫಿಟ್ ಇಂಡಿಯಾ ಅಭಿಯಾನ ಮತ್ತು ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸಿದರು. ಮಂಗಳಾ ಕ್ರೀಡಾಂಗಣದಿಂದ ಆರಂಭವಾದ ಜಾಥಾ ಕಾರ್‌ಸ್ಟ್ರೀಟ್, ಕ್ಲಾಕ್ ಟವರ್, ಪಿವಿಎಸ್ ಸರ್ಕಲ್, ಲಾಲ್‌ಬಾಗ್ ಹಾಗೂ ಲೇಡಿಹಿಲ್ ಮಾರ್ಗವಾಗಿ ಸಂಚರಿಸಿ ಮತ್ತೆ ಮಂಗಳಾ ಕ್ರೀಡಾಂಗಣದಲ್ಲಿ ಸಮಾರೋಪಗೊಂಡಿತು. ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವವಿದ್ಯಾಲಯ ಎನ್‌ಎಸ್‌ಎಸ್ ಕಾರ್ಯಕ್ರಮ ಸಂಯೋಜಕ ಶೇಷಪ್ಪ ಅಮೀನ್, ಚಿತ್ತರಂಜನ್ ಬೋಳಾರ್, ಚಲನಚಿತ್ರ ನಟ ದಿನೇಶ್ ಅತ್ತಾವರ, ಅನಿಲ್ ಶೆಟ್, ಹಾರ್ದಿಕ್ ರೈ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!