ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ.

ಜೂಜಾಟ ನಡೆಯುತ್ತಿರುವ ಕುರಿತು ದೊರೆತ ಮಾಹಿತಿಯ ಮೇರೆಗೆ ಕಾರ್ಕಳ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರ ಮಾರ್ಗದರ್ಶನದಲ್ಲಿ ಕಾರ್ಕಳ ವೃತ್ತ ನಿರೀಕ್ಷಕ ಸಂದೀಪ್ ಜಿ.ಎಸ್. ನೇತೃತ್ವದ ತಂಡ ದಾಳಿ ನಡೆಸಿತು. ಈ ವೇಳೆ ಚಪ್ಪರ ಹಾಗೂ ಟಾರ್ಪಾಲ್ ಅಡಿ ಟೇಬಲ್ ಸುತ್ತ ಕುಳಿತು ಹಣ ಪಣಕ್ಕೊಡ್ಡಿ ‘ಅಂದರ್-ಬಾಹರ್’ ಜೂಜಾಟ ನಡೆಸುತ್ತಿದ್ದವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ದಾಳಿಯಲ್ಲಿ ವಿಜೇಶ್ ಕುಮಾರ್ (40), ದಸ್ತಗೀರ್ (33) ಹಾಗೂ ರೋಹಿತ್ (34) ಅವರನ್ನು ಸ್ಥಳದಲ್ಲೇ ಬಂಧಿಸಲಾಯಿತು. ಜೂಜಾಟಕ್ಕೆ ಬಳಸಿದ್ದ ರೂ.23,970 ನಗದು, ರೂ.35 ಸಾವಿರ ಮೌಲ್ಯದ ಐದು ಮೊಬೈಲ್ ಫೋನ್‌ಗಳು, ಇಸ್ಪೀಟ್ ಕಾರ್ಡ್ಗಳು, ಟೇಬಲ್, ಕುರ್ಚಿಗಳು, ಬ್ಯಾಟರಿ ಹಾಗೂ ವಿದ್ಯುತ್ ಪರಿಕರಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದಲ್ಲದೆ ಜೂಜಾಟಕ್ಕೆ ಆಗಮಿಸಲು ಬಳಸಿದ್ದ ಮೂರು ಕಾರುಗಳು, ಎರಡು ಮೋಟಾರ್‌ಸೈಕಲ್‌ಗಳು ಹಾಗೂ ಒಂದು ಸ್ಕೂಟರ್‌ನ್ನೂ ಪೊಲೀಸರು ಜಪ್ತಿ ಮಾಡಿದ್ದಾರೆ. ವಶಪಡಿಸಿಕೊಂಡ ಸ್ವತ್ತುಗಳ ಒಟ್ಟು ಮೌಲ್ಯ ರೂ.13.07 ಲಕ್ಷ ಎಂದು ಅಂದಾಜಿಸಲಾಗಿದೆ. ಈ ಸಂಬಂಧ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ತನಿಖೆ ಮುಂದುವರಿಸಿದ ಪೊಲೀಸರು ದಾಳಿ ವೇಳೆ ಪರಾರಿಯಾಗಿದ್ದ ವಿಜಯ (39), ಮಹೇಶ್ (26), ಕಿಶೋರ್ ಕುಮಾರ್ (46) ಹಾಗೂ ಸಂತೋಷ್ ಆಚಾರ್ಯ (35) ಅವರನ್ನು ಬಳಿಕ ಬಂಧಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

error: Content is protected !!