ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಜನನ್ ಜಗನ್ನಾಥ್, ಸುಶಾನ್ ಪೂಜಾರಿ ಮತ್ತು ಪರೀಕ್ಷಿತ್ ಎಂದು ಗುರುತಿಸಲಾಗಿದೆ. ಗೂಡ್ ಶೆಡ್ಡೆ ಪ್ರದೇಶದಲ್ಲಿ ಸಾರ್ವಜನಿಕರಿಗೆ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯಲ್ಲಿ ಆರೋಪಿಗಳಿಂದ 11.68 ಗ್ರಾಂ ಎಂಡಿಎಂಎ, 1,110 ನಗದು, ಮೂರು ಮೊಬೈಲ್ ಫೋನ್‌ಗಳು ಹಾಗೂ ಒಂದು ತೂಕ ಮಾಪನ ಯಂತ್ರವನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.



