ಜನ ಮನದ ನಾಡಿ ಮಿಡಿತ

Advertisement

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ ಗಾಯಗೊಳಿಸಿದ ಘಟನೆ ಮೂಡುಬಿದಿರೆ ತಾಲೂಕಿನ ಸಂಪಿಗೆ ಗ್ರಾಮದ ಪುಲುಕುಳದಲ್ಲಿ ನಡೆದಿದೆ.

ಈ ಸಂಬಂಧ ಪುಲುಕುಳ ನಿವಾಸಿ ಆಲ್ವಿನ್ ಸಾಂಕ್ತಿಸ್ ವಿರುದ್ಧ ಮೂಡಬಿದಿರೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನೆರೆಮನೆಯ ನಿವಾಸಿ ನವೀನ್ ಸಾಂಕ್ತಿಸ್ ಅವರು ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ, ತಮ್ಮ ದನಗಳು ಆರೋಪಿಯ ತೋಟಕ್ಕೆ ಹೋಗಿದ್ದ ವಿಚಾರಕ್ಕೆ ಕೋಪಗೊಂಡ ಆಲ್ವಿನ್ ಸಾಂತಿಸ್, ಮನೆಯ ಬಳಿ ಕಟ್ಟಿಹಾಕಿದ್ದ ಎರಡು ದನಗಳ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಿದ್ದಾರೆ. ಗಾಯಗೊಂಡ ಎರಡೂ ದನಗಳು ಗರ್ಭಿಣಿ ದನಗಳಾಗಿದ್ದು, ದನಗಳ ಹೊಟ್ಟೆಯ ಭಾಗಕ್ಕೆ ದಂಟೆಯಿಂದ ಹೊಡೆದ ಪರಿಣಾಮ ಗರ್ಭದಲ್ಲಿದ್ದ ಕರುಗಳಿಗೂ ಗಾಯಗಳಾಗಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಘಟನೆ ಕುರಿತು ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!