ಜನ ಮನದ ನಾಡಿ ಮಿಡಿತ

Advertisement

ಬ್ರಹ್ಮಾವರ: ತಲೆಯ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಸಾವು..!

ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ ಬಡಿದ ಪರಿಣಾಮ ಒಂದೂವರೆ ವರ್ಷದ ಗಂಡು ಮಗು ಮೃತಪಟ್ಟ ದಾರುಣ ಘಟನೆ ಬ್ರಹ್ಮಾವರ ಸಮೀಪ ಹೆರಂಜೆಯಲ್ಲಿ ಸಂಭವಿಸಿದೆ.

ಮೃತ ಮಗುವನ್ನು ದಕ್ಷ್ ಪೂಜಾರಿ (1.5) ಎಂದು ಗುರುತಿಸಲಾಗಿದೆ. ಈತ ಹೆರಂಜೆಯ ಪ್ರಶಾಂತ್ ಪೂಜಾರಿ ಹಾಗೂ ಸುಚಿತ್ರ ಪೂಜಾರಿ ದಂಪತಿಯ ಪುತ್ರನಾಗಿದ್ದಾನೆ. ದಕ್ಷ್ ಗೆ ದಿಯಾ (6) ಎಂಬ ಅಕ್ಕ ಇದ್ದು, ಆಕೆ ಬ್ರಹ್ಮಾವರದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಥಮ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾಳೆ. ಪ್ರಶಾಂತ್ ಪೂಜಾರಿ ಅವರು ಕಳೆದ ಸುಮಾರು 13 ವರ್ಷಗಳಿಂದ ಬ್ರಹ್ಮಾವರ ಗಾಂಧಿ ಮೈದಾನದ ಸಮೀಪ ಸಣ್ಣ ಗಾಡಿಯಲ್ಲಿ ಫಾಸ್ಟ್ ಫುಡ್ ವ್ಯಾಪಾರ ನಡೆಸುತ್ತಿದ್ದು, ಕುಟುಂಬ ಜೀವನ ಸಾಗಿಸುತ್ತಿದ್ದರು. ಮಾಹಿತಿಗಳ ಪ್ರಕಾರ ಮಂಗಳವಾರ ಬೆಳಿಗ್ಗೆ ಸುಮಾರು 8.15 ಗಂಟೆಯ ವೇಳೆ ಈ ದುರ್ಘಟನೆ ಸಂಭವಿಸಿದೆ. ಮಗಳು ದಿಯಾಳನ್ನು ಶಾಲಾ ಬಸ್ಸಿಗೆ ಕಳುಹಿಸಲು ಸುಚಿತ್ರ ಪೂಜಾರಿ ಅವರು ಮಗ ದಕ್ಷ್ನನ್ನು ಕೈಯಲ್ಲಿ ಎತ್ತಿಕೊಂಡು ಮನೆಯಿಂದ ಹೊರಟಿದ್ದರು. ಈ ವೇಳೆ ರಸ್ತೆಯ ಬದಿಯಲ್ಲಿದ್ದ ಸುಮಾರು 40 ಅಡಿ ಎತ್ತರದ ತೆಂಗಿನ ಮರದಿಂದ ತೆಂಗಿನಕಾಯಿ ಕೆಳಗೆ ಬಿದ್ದು ದಕ್ಷ್ ತಲೆಗೆ ಬಡಿದಿದೆ. ಗಂಭೀರವಾಗಿ ಗಾಯಗೊಂಡಿದ್ದ ಮಗುವನ್ನು ತಕ್ಷಣ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ್ದರೂ, ತಲೆಯ ಮೆದುಳಿಗೆ ತೀವ್ರ ಪೆಟ್ಟಾಗಿದ್ದ ಕಾರಣ ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!