ಜನ ಮನದ ನಾಡಿ ಮಿಡಿತ

Advertisement

ತಿರುವನಂತಪುರ : ಕೇರಳದಲ್ಲಿ ಮತ್ತೆ ನಿಫಾ ಆತಂಕ…!

 

ಕೇರಳದಲ್ಲಿ ಮತ್ತೊಮ್ಮೆ ನಿಫಾ ವೈರಸ್ ಆತಂಕ ಸೃಷ್ಟಿಯಾಗಿದ್ದು, ಕೋಯಿಕ್ಕೋಡ್ ಜಿಲ್ಲೆಯ 43 ವರ್ಷದ ವ್ಯಕ್ತಿಯಲ್ಲಿ ಸೋಂಕಿನ ಶಂಕೆ ವ್ಯಕ್ತವಾಗಿದೆ.

ಪ್ರಾಥಮಿಕ ಪರೀಕ್ಷೆಯಲ್ಲಿ ನಿಫಾ ಸೋಂಕಿನ ಲಕ್ಷಣಗಳು ಕಂಡುಬ0ದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತುರ್ತು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ರಾಜ್ಯಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ. ಕೇರಳ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ನಡೆಸಿದ ಪ್ರಾಥಮಿಕ ಪರೀಕ್ಷೆಯಲ್ಲಿ ಸೋಂಕಿನ ಶಂಕೆ ವ್ಯಕ್ತವಾಗಿದ್ದು, ಅಂತಿಮ ದೃಢೀಕರಣಕ್ಕಾಗಿ ರೋಗಿಯ ಮಾದರಿಯನ್ನು ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ. ಅಂತಿಮ ವರದಿ ಶೀಘ್ರದಲ್ಲೇ ಲಭ್ಯವಾಗುವ ನಿರೀಕ್ಷೆಯಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಉದ್ಯಮಿಯಾಗಿರುವ ರೋಗಿ ಮೊದಲಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ಅವರನ್ನು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ವೆಂಟಿಲೇಟರ್ ಸಹಾಯದೊಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ಹರಡುವಿಕೆಯನ್ನು ತಡೆಯುವ ಉದ್ದೇಶದಿಂದ ರೋಗಿಯ ಸಂಪರ್ಕಕ್ಕೆ ಬಂದವರನ್ನು ಗುರುತಿಸಿ ಪ್ರತ್ಯೇಕಿಸುವ ಕಾರ್ಯವನ್ನು ಆರೋಗ್ಯ ಇಲಾಖೆ ಆರಂಭಿಸಿದೆ. ಆರೋಗ್ಯ ಸಿಬ್ಬಂದಿ ಸೇರಿದಂತೆ ನಿಕಟ ಸಂಪರ್ಕದಲ್ಲಿದ್ದವರಿಗೆ ಕ್ವಾರಂಟೈನ್‌ನಲ್ಲಿ ಇರುವಂತೆ ಸೂಚಿಸಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!