ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

ಪ್ರಖ್ಯಾತ ಶಕ್ತಿ ಪೀಠ ಶ್ರೀ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ತಮಿಳು ನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಶುಕ್ರವಾರ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

ಬಿಗಿ ಭದ್ರತೆಯ ನಡುವೆ ಮಂಗಳೂರಿನಿಂದ ರಸ್ತೆ ಮೂಲಕ ಕೊಲ್ಲೂರಿಗೆ ಆಗಮಿಸಿದ ವಿಜಯ್ ಅವರನ್ನು ದೇವಾಲಯದ ಆವರಣದಲ್ಲಿ ಸಾಂಪ್ರದಾಯಿಕ ಸ್ವಾಗತ ನೀಡಿ ಬರ ಮಾಡಿಕೊಳ್ಳಲಾಯಿತು. ದೇವಾಲಯದ ಹೊರ ಅವರಣದಲ್ಲಿ ನೆರೆದಿದ್ದ ನೂರಾರು ಅಭಿಮಾನಿಗಳು ವಿಜಯ್ ಅವರನ್ನು ನೋಡುತ್ತಲೇ ಜಯಕಾರ ಹಾಕಿದ್ದಾರೆ. ಸಂಪ್ರದಾಯದಂತೆ ಶಾಲು ಹೊದ್ದುಕೊಂಡು ಒಳಪ್ರವೇಶಿಸಿದ ತಮಿಳು ನಾಡು ಮುಖ್ಯಮಂತ್ರಿ ವಿಜಯ್ ದೇವರಿಗೆ ತುಪ್ಪದ ದೀಪ ಹಚ್ಚಿ ಪೂಜೆ ಸಲ್ಲಿಸಿದ್ದಾರೆ. ಇನ್ನು ಈ ಸಂದರ್ಭ ದೇವಾಲಯದ ಆಡಳಿತ ಧರ್ಮದರ್ಶಿ ಬಾಬು ಹೆಗ್ಡೆ, ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ಸಹಾಯಕ ಕಮಿಶನರ್, ದೇವಾಲಯ ಆಡಳಿತ ಮಂಡಳಿ ಸದಸ್ಯರು, ಮಾಜಿ ಶಾಸಕ ಗೋಪಾಲ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!