ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಕೆಂಗೇರಿಯಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.

ಮೃತರನ್ನು ಬಿಜಿಎಸ್ ಕಾಲೇಜಿನ ನಾಲ್ಕನೇ ವರ್ಷದ ನರ್ಸಿಂಗ್ ವಿದ್ಯಾರ್ಥಿಗಳಾದ ಅತುಲ್ ಸಿ.ಬಿ. ಹಾಗೂ ಗೌರಿ ಶಂಕರ್ ಎಂದು ಗುರುತಿಸಲಾಗಿದೆ. ಶನಿವಾರ ಬೆಳಗಿನ ಜಾವ ಸುಮಾರು 2 ಗಂಟೆ ವೇಳೆಗೆ ಕೆಂಗೇರಿಯ ಆರ್.ಆರ್. ದಂತ ಕಾಲೇಜು ಸಮೀಪ ಈ ದುರ್ಘಟನೆ ಸಂಭವಿಸಿದೆ. ಮೈಸೂರಿನಿಂದ ಬೆಂಗಳೂರಿಗೆ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವಾಹನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರಾಜರಾಜೇಶ್ವರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿದ್ದು, ಪರೀಕ್ಷೆಯ ಬಳಿಕ ಸಂಬಂಧಿಕರಿಗೆ ಹಸ್ತಾಂತರಿಸಲಾಗುವುದು. ಈ ಕುರಿತು ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣ ಕುರಿತು ತನಿಖೆ ಮುಂದುವರಿದಿದೆ

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!