ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು ಆರೋಪ ವ್ಯಕ್ತಪಡಿಸಿದ್ದಾರೆ.

ಹೆದ್ದಾರಿ ಕಾಮಗಾರಿಯ ವೇಳೆ ಅಗೆದಿರುವ ರಸ್ತೆಗೆ ಕಾಂಕ್ರೀಟ್ ಹಾಕದೆ ಇರುವ ಕಾರಣದಿಂದ ಮಳೆಗಾಲ ಆರಂಭದಲ್ಲೇ ಬೃಹತ್ ಗಾತ್ರದ ಹೊಂಡಗುಂಡಿಗಳಲ್ಲಿ ಕೆಸರು ನೀರು ತುಂಬಿದೆ. ಹೊಂಡದಲ್ಲಿ ಬಿದ್ದ ವಾಹನಗಳು ಮತ್ತೆ ಎದ್ದೇಳಲು ಸಾಧ್ಯವಾಗದೆ ಹರಸಾಹಸ ಪಡುವ ದೃಶ್ಯಗಳು ಕಂಡುಬಂದಿವೆ.

ದ್ವಿಚಕ್ರವಾಹನ ಸವಾರರಂತೂ ರಾತ್ರಿ ವೇಳೆ ಗುಂಡಿಗೆ ಬಿದ್ದು ಪ್ರಾಣಕ್ಕೆ ಅಪಾಯವಾಗುವ ಸಂಭವಗಳು ಜಾಸ್ತಿ ಇವೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಗುತ್ತಿಗೆ ವಹಿಸಿಕೊಂಡು ಕೆಲಸ ನಿರ್ವಹಿಸುವ ಕೆಎನ್‌ಆರ್‌ಸಿ ಕಂಪೆನಿಯ ಪ್ರಮುಖರಲ್ಲಿ ಅನೇಕ ಬಾರಿ ಹೇಳಿದರು ಯಾವುದೇ ಸ್ಪಂದನೆ ದೊರೆತಿಲ್ಲ ಎಂದು ಆರೋಪ ಮಾಡಿದ್ದಾರೆ. ಮಳೆಗಾಲವಾದ್ದರಿಂದ ಗುಂಡಿಗಳಿಗೆ ಬಿದ್ದು ಜೀವಕ್ಕೆ ಅಪಾಯವಾಗುವ ಮುನ್ನ ಸಂಬಂಧಿಸಿದ ಇಲಾಖೆ ಎಚ್ಚೆತ್ತುಕೊಂಡು ಕ್ರಮ ಕೈಗೊಳ್ಳಲು ಸ್ಥಳೀಯರು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!