ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ ದರ್ಶನ ಪಡೆದಿದ್ದಾರೆ.

ಈ ವೇಳೆ ದೇವಳದಲ್ಲಿ ನಡೆದ ಚಂಡಿಕಾ ಹೋಮದಲ್ಲಿ ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇವಿ ದರ್ಶನದ ಬಳಿಕ ಮುಖಂಡರೊಂದಿಗೆ ಕೆಲಕಾಲ ಮಾತುಕತೆ ನಡೆಸಿದ ವಿಜಯೇಂದ್ರ, ಪಕ್ಷದ ಸ್ಥಳೀಯ ಯುವ ನಾಯಕರನ್ನು ಭೇಟಿ ಮಾಡಿ ಸಂಘಟನಾ ಚಟುವಟಿಕೆಗಳ ಕುರಿತು ಚರ್ಚಿಸಿದ್ದಾರೆ.

ವಿಜಯೇಂದ್ರ ಅವರೊಂದಿಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಹಾಗೂ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಉಪಸ್ಥಿತರಿದ್ದರು.



