ಜನ ಮನದ ನಾಡಿ ಮಿಡಿತ

Advertisement

ದೇರಳಕಟ್ಟೆ, ಕಟಪಾಡಿಯಲ್ಲಿ ಎಂಸಿಸಿ ಬ್ಯಾಂಕ್‌ನ ಹೊಸ ಶಾಖೆಗಳು ಶೀಘ್ರವೇ ಆರಂಭ : ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ…!

ಮಂಗಳೂರು:

114 ವರ್ಷಗಳ ಇತಿಹಾಸ ಹೊಂದಿರುವ ಎಂಸಿಸಿ ಬ್ಯಾಂಕ್ ಲಿಮಿಟೆಡ್ ನ 22ನೇ ಶಾಖೆ ದೇರಳಕಟ್ಟೆಯಲ್ಲಿ ಜೂನ್ 28ರಂದು ಹಾಗೂ 23ನೇ ಶಾಖೆ ಉಡುಪಿಯ ಕಟಪಾಡಿಯಲ್ಲಿ ಆಗಸ್ಟ್ 2ರಂದು ಉದ್ಘಾಟನೆಯಾಗಲಿದೆ.

 

ದೇರಳಕಟ್ಟೆ ಶಾಖೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಉದ್ಘಾಟಿಸಲಿದ್ದು, ಇದೇ ಸಂದರ್ಭದಲ್ಲಿ ಬ್ಯಾಂಕಿನ 16ನೇ ಎಟಿಎಂ ಕೂಡ ಕಾರ್ಯಾರಂಭ ಮಾಡಲಿದೆ ಎಂದು ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ತಿಳಿಸಿದರು .

ನಗರದ ಎಂಸಿಸಿ ಬ್ಯಾಂಕಿನ‌ ಪ್ರಧಾನ ಕಚೇರಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು , 2025-26ನೇ ಹಣಕಾಸು ವರ್ಷದಲ್ಲಿ ಬ್ಯಾಂಕ್ ಗಮನಾರ್ಹ ಸಾಧನೆ ದಾಖಲಿಸಿದ್ದು, ಒಟ್ಟು ವ್ಯವಹಾರ ವಹಿವಾಟು 22.89 ಶೇಕಡಾ ಏರಿಕೆಯೊಂದಿಗೆ 1,535 ಕೋಟಿ ರೂ. ಮೈಲಿಗಲ್ಲು ತಲುಪಿದೆ . ಬ್ಯಾಂಕಿನ ನಿವ್ವಳ ಮೌಲ್ಯ 83.76 ಕೋಟಿ ರೂ.ಗಳಿಂದ 91.80 ಕೋಟಿ ರೂ.ಗಳಿಗೆ ಏರಿಕೆಯಾಗಿದೆ. ಎನ್‌ಆರ್‌ಐ ಗ್ರಾಹಕರ ಬೆಂಬಲ ಬ್ಯಾಂಕಿನ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ತಿಳಿಸಿದರು .

2018ರಲ್ಲಿ ಪ್ರಸ್ತುತ ಆಡಳಿತ ಮಂಡಳಿ ಅಧಿಕಾರ ವಹಿಸಿಕೊಂಡ ಬಳಿಕ ಬ್ಯಾಂಕ್ ವೇಗದ ಬೆಳವಣಿಗೆಯ ಹಾದಿಯಲ್ಲಿದ್ದು, ಠೇವಣಿಗಳು 304 ಕೋಟಿ ರೂ.ಗಳಿಂದ 876 ಕೋಟಿ ರೂ.ಗಳಿಗೆ, ಸಾಲ ಮತ್ತು ಮುಂಗಡಗಳು 191 ಕೋಟಿ ರೂ.ಗಳಿಂದ 657 ಕೋಟಿ ರೂ.ಗಳಿಗೆ ಹಾಗೂ ಷೇರು ಬಂಡವಾಳ 13 ಕೋಟಿ ರೂ.ಗಳಿಂದ 34 ಕೋಟಿ ರೂ.ಗಳಿಗೆ ಏರಿಕೆಯಾಗಿದೆ. ಒಟ್ಟು ವ್ಯವಹಾರ ವಹಿವಾಟು 496 ಕೋಟಿ ರೂ.ಗಳಿಂದ 1,535 ಕೋಟಿ ರೂ.ಗಳಿಗೆ ತಲುಪಿದ್ದು, 209 ಶೇಕಡಾ ಬೆಳವಣಿಗೆ ದಾಖಲಿಸಿದೆ ಎಂದರು.

ಬ್ಯಾಂಕಿನ ಕಾರ್ಯವ್ಯಾಪ್ತಿಯನ್ನು ಸಂಪೂರ್ಣ ಕರ್ನಾಟಕ ರಾಜ್ಯಕ್ಕೆ ವಿಸ್ತರಿಸಲಾಗಿದ್ದು, ಕೋರ್ ಬ್ಯಾಂಕಿಂಗ್ ತಂತ್ರಜ್ಞಾನದ ಮೂಲಕ ಗ್ರಾಹಕರಿಗೆ ಸೇವೆ ಒದಗಿಸಲಾಗುತ್ತಿದೆ. ಖಾಸಗಿ ಹಾಗೂ ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ ಸಮಾನವಾದ ವಿವಿಧ ಹಣಕಾಸು ಉತ್ಪನ್ನಗಳು ಮತ್ತು ಸೇವೆಗಳನ್ನು ಬ್ಯಾಂಕ್ ನೀಡುತ್ತಿದೆ ಎಂದು ಅವರು ತಿಳಿಸಿದರು.

ಮೊರ್ಗನ್ಸ್ ಗೇಟ್ ಶಾಖೆಯನ್ನು ಜುಲೈ 25ರಂದು, ಮೂಡಬಿದಿರೆ ಶಾಖೆಯನ್ನು ಆಗಸ್ಟ್ 22ರಂದು ಹೊಸ ಸ್ಥಳಕ್ಕೆ ಸ್ಥಳಾಂತರಿಸಲಾಗುವುದು. ಕಾರ್ಕಳ ಶಾಖೆಯನ್ನು ಆಗಸ್ಟ್ 26ರಂದು ಸ್ವಂತ ಕಟ್ಟಡಕ್ಕೆ ಸ್ಥಳಾಂತರಿಸುವ ಯೋಜನೆಯೂ ಇದೆ ಎಂದು ತಿಳಿಸಿದರು.

ಎಂಸಿಸಿ ಬ್ಯಾಂಕ್ ಶಿಕ್ಷಣ ಸಾಲ, ಎಂಎಸ್‌ಎಂಇ ಸಾಲ, ವಾಹನ ಸಾಲ, ಗೃಹ ಸಾಲ ಹಾಗೂ ಚಿನ್ನದ ಸಾಲ ಸೇರಿದಂತೆ ವಿವಿಧ ಹಣಕಾಸು ಸೇವೆಗಳನ್ನು ಒದಗಿಸುತ್ತಿದ್ದು, ಉಚಿತ ಎಟಿಎಂ ಹಾಗೂ ಮೊಬೈಲ್ ಬ್ಯಾಂಕಿಂಗ್ ಸೇವೆಗಳನ್ನೂ ನೀಡುತ್ತಿದೆ. ಬ್ಯಾಂಕಿನ ಠೇವಣಿಗಳು ಡಿಐಸಿಜಿಸಿ ವಿಮಾ ವ್ಯಾಪ್ತಿಯಲ್ಲಿವೆ ಎಂದು ಅವರು ವಿವರಿಸಿದರು.

.
ಪತ್ರಿಕಾಗೋಷ್ಠಿಯಲ್ಲಿ ಉಪಾಧ್ಯಕ್ಷ ಜೆರಾಲ್ಡ್ ಜೂಡ್ ಡಿಸಿಲ್ವಾ, ನಿರ್ದೇಶಕರಾದ ಆ್ಯಂಡ್ ಡಿಸೋಜಾ, ಡಾ. ಜೆರಾಲ್ಡ್ ಪಿಂಟೊ, ಅನಿಲ್ ಪತ್ರಾವೊ, ಜಿ.ಪಿ. ‘ರೊಡ್ರಿಗಸ್, ಡೇವಿಡ್ ಡಿಸೋಜಾ, ಎಲ್ಯಾಯ್ ಕಿರಣ್ ಕ್ರಾಸ್ಕೊ, ಹೆರಾಲ್ಡ್ ಮೊಂತೇರೊ, ರೋಶನ್ ಡಿಸೋಜಾ, ಮೆಲ್ವಿನ್ ವಾಸ್, ವಿನ್ಸೆಂಟ್ ಲಸ್ರಾದೊ, ಸಿ.ಜಿ. ಪಿಂಟೊ, ಸುಶಾಂತ್ ಸಲ್ಮಾನ್ಯಾ, ಐರಿನ್ ರೆಬೆಲ್ಲೊ, ಡಾ. ಫ್ರೀಡಾ ಡಿಸೋಜಾ, ಆಲ್ವಿನ್ ಮೊಂತೇರೊ, ಫೆಲಿಕ್ಸ್ ಡಿಕ್ರೂಜ್, ಶರ್ಮಿಳಾ ಮಿನೇಜಸ್ ಹಾಗೂ ಪ್ರಧಾನ ವ್ಯವಸ್ಥಾಪಕ ಸುನಿಲ್ ಮಿನೇಜಸ್ ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!