ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಬಿಸಿರೋಡಿನಲ್ಲಿ ಟ್ರಾಫಿಕ್ ಪೊಲೀಸರ ದಿಢೀರ್ ಕಾರ್ಯಾಚರಣೆ….!

ಟ್ರಾಫಿಕ್ ಎಸ್. ಐ.ಆದರ್ಶ್ ನೇತ್ರತ್ವದಲ್ಲಿ ಟ್ರಾಫಿಕ್ ಪೋಲೀಸರ ತಂಡ ಬಿಸಿರೋಡಿನ ಹೃದಯಭಾಗದಲ್ಲಿ ಟ್ರಾಫಿಕ್ ನಿಯಮ ಪಾಲಿಸದ ವಾಹನ ಸವಾರರಿಗೆ ದಂಡ ವಿಧಿಸಿದ್ದಲ್ಲದೆ, ಟ್ರಾಫಿಕ್ ಕಿರಿಕಿರಿಯನ್ನು ಉಂಟು ಮಾಡುತ್ತಿದ್ದ ಬಸ್ ಹಾಗೂ ರಿಕ್ಷಾ ಚಾಲಕರಿಗೆ ಸಖತ್ ಕ್ಲಾಸ್ ತೆಗೆದುಕೊಂಡ ಘಟನೆ ನಡೆದಿದೆ.

ಬಿಸಿರೋಡಿನ ಬಸ್ ನಿಲ್ದಾಣದ ಬಳಿ ಗ್ರಾಮೀಣ ಭಾಗಕ್ಕೆ ತೆರಳುವ ಖಾಸಗಿ ಬಸ್ ಹಾಗೂ ಗ್ರಾಮೀಣ ಪರ್ಮಿಟ್ ಹೊಂದಿರುವ ರಿಕ್ಷಾ ಚಾಲಕರು ರಿಕ್ಷಾಗಳನ್ನು ನಿಲ್ಲಿಸಿ , ಸಂಚಾರಕ್ಕೆ ಅಡವಣೆ ಉಂಟು ಮಾಡುತ್ತಿದ್ದಾರೆ ಎಂಬ ಆರೋಪಗಳು ಅನೇಕ ದಿನಗಳಿಂದ ಕೇಳಿ ಬಂದಿತ್ತು. ಈ ದಿನ ಸ್ವತಃ ಟ್ರಾಫಿಕ್ ಎಸ್.ಐ.ಆದರ್ಶ್ ಅವರು ಫೀಲ್ಡಿಗಿಳಿದು ಬಸ್‌ಗಳ ಚಾಲಕರಿಗೆ ಹಾಗೂ ರಿಕ್ಷಾ ಚಾಲಕರಿಗೆ ಕ್ಲಾಸ್ ತೆಗೆದಯಕೊಂಡಿದ್ದಲ್ಲದೆ, ಪ್ರತಿ ವಾಹನಗಳ ದಾಖಲೆಗಳನ್ನು ಪರಿಶೀಲಿಸಿ, ನಿಯಮ ಪಾಲನೆಯ ಬಿಸಿ ಮುಟ್ಟಿಸಿದ್ದಾರೆ.

ಇದರ ಜೊತೆ ಒಟ್ಟು 25 ಪ್ರಕರಣಗಳನ್ನು ವಿವಿಧ ವಾಹನಗಳಿಗೆ ಬೇರೆ ಕಾರಣಗಳಿಗಾಗಿ ದಾಖಲು ಮಾಡಿದ್ದಾರೆ. ಅದರಲ್ಲಿ 13 ಪ್ರಕರಣಗಳು ಕರ್ಕಶ ಹಾರ್ನ್ಗಳನ್ನು ಅಳವಡಿಸಿದ ಕಾರಣಕ್ಕೆ ಉಳಿದಂತೆ ನಂಬರ್ ಪ್ಲೇಟ್ ಇಲ್ಲದ ವಾಹನಗಳು ಹಾಗೂ ಕರ್ಕಶ ಶಬ್ದ ಮಾಡುವ ವಾಹನಗಳ ಸೈಲೆನ್ಸ್ರ್‌ಗಳನ್ನು ಹೊಂದಿರುವ ವಾಹನಗಳ ಮೇಲೆ ಪ್ರಕರಣ ದಾಖಲು ಮಾಡಿರುವ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ. ಬಿಸಿರೋಡಿನ ಕೈಕಂಬದಲ್ಲೂ ಇದೇ ಮಾದರಿಯ ಕಾರ್ಯಾಚರಣೆ ಮಾಡುವಂತೆ ಸಾರ್ವಜನಿಕ ವಲಯದಿಂದ ಒತ್ತಾಯಗಳು ಕೇಳಿ ಬಂದಿದ್ದು, ಇಲ್ಲಿ ಟ್ರಾಫಿಕ್ ರೂಲ್ ಫಾಲೋ ಮಾಡದೆ ಅಡ್ಡಾದಿಡ್ಡಿ ವಾಹನಗಳ ಚಾಲನೆ ಮಾಡುತ್ತಿದ್ದಾರೆ ಎಂಬ ಆರೋಪಗಳು ಇವೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!