ಜನ ಮನದ ನಾಡಿ ಮಿಡಿತ

Advertisement

ದಾವಣಗೆರೆ: ಹರಿಹರದಲ್ಲಿ ಉತ್ತರ ಪ್ರದೇಶ ಮೂಲದ ಶಂಕಿತ ಉಗ್ರ ಬಂಧನ….!

ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಬಂಧಿತನಾಗಿರುವ ಉತ್ತರ ಪ್ರದೇಶ ಮೂಲದ 20 ವರ್ಷದ ಶಂಕಿತ ಉಗ್ರ ಸುಹೇಲ್ ವಿಚಾರಣೆ ವೇಳೆ ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಬಾಂಬ್ ಸ್ಫೋಟ ನಡೆಸುವ ಉದ್ದೇಶ ಹೊಂದಿದ್ದಾಗಿ ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.

ಹರಿಹರ ಕೈಗಾರಿಕಾ ಪ್ರದೇಶದ ಖಾಸಗಿ ಕಾರ್ಖಾನೆಯೊಂದರಲ್ಲಿ ಪೇಂಟರ್ ಆಗಿ ಕೆಲಸ ಮಾಡುತ್ತಿದ್ದ ಸುಹೇಲ್ ತನ್ನ ನೈಜ ಚಟುವಟಿಕೆಗಳನ್ನು ಮರೆಮಾಚಿಕೊಂಡಿದ್ದ ಎನ್ನಲಾಗಿದೆ. ಆತನ ಚಲನವಲನಗಳ ಮೇಲೆ ನಿಗಾ ಇಟ್ಟಿದ್ದ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದು, ಈ ಸಂಬಂಧ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ವೇಳೆ ಸುಹೇಲ್ ಬಳಿಯಿದ್ದ ಮೊಬೈಲ್ ಫೋನ್‌ನಲ್ಲಿ ‘ರಾಣಾ ಭಾಯ್’ ಹೆಸರಿನಲ್ಲಿ ಪಾಕಿಸ್ತಾನದ ಕೋಡ್ ಹೊಂದಿರುವ ದೂರವಾಣಿ ಸಂಖ್ಯೆ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಅಲ್ಲದೆ, ಮೊಬೈಲ್ ಗ್ಯಾಲರಿಯಲ್ಲಿ ಶಸ್ತ್ರಾಸ್ತ್ರಗಳನ್ನು ಹಿಡಿದುಕೊಂಡಿರುವ ಫೋಟೋಗಳೂ ಪತ್ತೆಯಾಗಿರುವುದಾಗಿ ಹೇಳಲಾಗಿದೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದು, ಶಂಕಿತನ ಸಂಪರ್ಕ ಜಾಲ, ಉದ್ದೇಶ ಹಾಗೂ ಇತರ ಮಾಹಿತಿಗಳ ಬಗ್ಗೆ ಪರಿಶೀಲನೆ ಮುಂದುವರಿದಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!