ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಮಣಿಪಾಲದಲ್ಲಿ ಮದ್ಯಪಾನ ಮಾಡಿ ಸ್ಕೂಟರ್ ಗೆ ಡಿಕ್ಕಿ ಹೊಡೆದ ಕಾರು ಚಾಲಕ..!

ಮಣಿಪಾಲದ ಈಶ್ವರನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಮದ್ಯಪಾನ ಮಾಡಿ ಕಾರು ಚಲಾಯಿಸಿ ಸ್ಕೂಟಿಗೆ ಡಿಕ್ಕಿ ಹೊಡೆದು ಯುವಕನಿಗೆ ಗಂಭೀರ ಗಾಯವಾಗುವಂತೆ ಮಾಡಿದ ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

ಜೂನ್ 19ರಂದು ರಾತ್ರಿ 10.08ರ ಸುಮಾರಿಗೆ ಮಣಿಪಾಲದ ಸಾಯಿಸಾಗರ್ ಹೋಟೆಲ್ ಎದುರಿನ ಯು-ಟರ್ನ್ ಬಳಿ ಈ ಅಪಘಾತ ಸಂಭವಿಸಿತ್ತು. ಕರ್ವಾಲು ಅಲೆವೂರು ಗ್ರಾಮದ ಅಭಿಷೇಕ್ ನಾಯಕ್ ಅವರು ತಮ್ಮ ಸ್ಕೂಟಿಯಲ್ಲಿ ಕೆಳಪರ್ಕಳದಲ್ಲಿರುವ ಮನೆಗೆ ತೆರಳುತ್ತಿದ್ದ ವೇಳೆ, ಎಂಐಟಿ ಕಡೆಯಿಂದ ಬಂದ ಕಾರು ಸ್ಕೂಟಿಗೆ ಡಿಕ್ಕಿ ಹೊಡೆದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಕಾರನ್ನು ಕಾರ್ಕಳ ತಾಲೂಕಿನ ಮುಡಾರು ನಿವಾಸಿ ಸಮೇಗ್ದ್ ಎಲ್.ಜೆ. ಎಂಬಾತ ಚಲಾಯಿಸುತ್ತಿದ್ದು, ಮದ್ಯಪಾನದ ಅಮಲಿನಲ್ಲಿ ಅಜಾಗರೂಕವಾಗಿ ವಾಹನ ಚಲಾಯಿಸಿದ್ದರಿಂದ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಅಭಿಷೇಕ್ ನಾಯಕ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಸ್ಕೂಟಿ ಹಾಗೂ ಕಾರು ಜಖಂಗೊಂಡಿವೆ. ಈ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಜೂನ್ 22ರಂದು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!