ನಾಡಬಾಂಬ್ ಸ್ಪೋ*ಟಗೊಂಡು ವಕೀಲರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಹಾರೋಹಳ್ಳಿ ಗ್ರಾಮದಲ್ಲಿ ನಡೆದಿದೆ.

ಎನ್.ಸಿ.ಮೋಹನ್ ಗಾಯಗೊಂಡ ವಕೀಲ. ಮೋಹನ್ ಸುಂಡಗಟ್ಟ ಗ್ರಾಮದಲ್ಲಿ ಫಾರ್ಮ್ ಹೌಸ್ ಹೊಂದಿದ್ದಾರೆ. ತಡರಾತ್ರಿ ತಮ್ಮ ಫಾರ್ಮ್ ಹೌಸ್‌ನಲ್ಲಿ ಅವರು ತಂಗಿದ್ದರು. ಈ ವೇಳೆ ಕಿಡಿಗೇಡಿಗಳು ಫಾರ್ಮ್ ಹೌಸ್‌ನ ಗೇಟ್ ಬಳಿ ನಾಡಬಾಂಬ್ ಇರಿಸಿದ್ದಾರೆ. ಮುಂಜಾನೆ ಫಾರ್ಮ್ ಹೌಸ್‌ನಿಂದ ಹೊರಬಂದ ವೇಳೆ ಗೇಟ್ ಬಳಿ ಇರಿಸಿದ್ದ ನಾಡಬಾಂಬ್ ಗಮನಿಸದೇ ಮೋಹನ್ ಅದರ ಮೇಲೆ ಕಾಲಿಟ್ಟಿದ್ದಾರೆ. ಈ ಸಂದರ್ಭ ನಾಡಬಾಂಬ್ ಸ್ಪೋಟಗೊಂಡಿದೆ. ಪರಿಣಾಮ ಅವರು ತೀವ್ರವಾಗಿ ಗಾಯಗೊಂಡಿದ್ದಾರೆ. ಮೋಹನ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋಡಿಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಡು ಪ್ರಾಣಿಗಳ ಬೇಟೆಗೆ ನಾಡಬಾಂ*ಬ್ ಇಟ್ಟಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ಸದ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



