ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಮಂಗಳೂರು ನಗರದ ಬೆಂದೂರ್‌ನಲ್ಲಿರುವ ಲಾಡ್ಜ್ನಲ್ಲಿ ಮಾದಕ ವಸ್ತು ಮಾರಾಟ..!

ಮಂಗಳೂರು ನಗರದ ಬೆಂದೂರ್‌ನಲ್ಲಿರುವ ಲಾಡ್ಜ್ ಒಂದರಲ್ಲಿ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಬಗ್ಗೆ ಮಂಗಳೂರು ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿ ಮಾಹಿತಿ ಸಂಗ್ರಹಿಸಿ ದಾಳಿ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿ 35.53 ಗ್ರಾಂ ಎಂಡಿಎಂಎ ಮತ್ತು 7 ಸಾವಿರದ 30 ರೂಪಾಯಿ ನಗದು ಹಣ ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರಿನ ಹಲಸೂರು ನಿವಾಸಿ ಮೊಹಮ್ಮದ್ ನದೀಂ, ಉಳ್ಳಾಲ ತಾಲೂಕು ಸೋಮೇಶ್ವರ ಉಚ್ಚಿಲದ ಪೆರಿಬೈಲ್ ನಿವಾಸಿ ಉಮರುಲ್ ಫಾರೂಕ್ ಮತ್ತು ಉಳ್ಳಾಲ ತಾಲೂಕಿನ ಕೆ.ಸಿ. ರೋಡ್ ಕಿನ್ಯಾ ನಿವಾಸಿ ಇಮ್ಮಿಯಾಜ್ ಇಸ್ಮಾಯಿಲ್ ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳನ್ನು ಮತ್ತು ಸೊತ್ತುಗಳನ್ನು ಮುಂದಿನ ತನಿಖೆಗಾಗಿ ಕದ್ರಿ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದು, ಕದ್ರಿ ಪೊಲೀಸರು ಎನ್.ಡಿ.ಪಿ.ಎಸ್. ಕಾಯ್ದೆಯಡಿ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!