ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ…!

ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆಯ ಅಂಗವಾಗಿ ಬಂಟ್ವಾಳ ನಗರ ಪೊಲೀಸ್ ಠಾಣೆ ವತಿಯಿಂದ ಔಷಧ ನಿಯಂತ್ರಣ ಇಲಾಖೆಯ ಅಧಿಕಾರಿಗಳೊಂದಿಗೆ ಜಂಟಿಯಾಗಿ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಮೆಡಿಕಲ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು.

ಪರಿಶೀಲನೆ ವೇಳೆ ಮೆಡಿಕಲ್‌ಗಳಲ್ಲಿ ಮಾರಾಟವಾಗುವ ಔಷಧಿಗಳ ದಾಖಲೆಗಳನ್ನು ಪರಿಶೀಲಿಸಲಾಯಿತು. ವೈದ್ಯರ ಪ್ರಿಸ್ಕ್ರಿಪ್ಷನ್ ಆಧಾರಿತ ಔಷಧಗಳ ವಿತರಣೆ, ನಿಷೇಧಿತ ಹಾಗೂ ದುರುಪಯೋಗಕ್ಕೆ ಒಳಪಡುವ ಔಷಧಿಗಳ ಸಂಗ್ರಹ ಮತ್ತು ಮಾರಾಟದ ಕ್ರಮಗಳ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಮಾದಕ ವಸ್ತುಗಳ ದುರುಪಯೋಗಕ್ಕೆ ಕಾರಣವಾಗಬಹುದಾದ ಔಷಧಿಗಳನ್ನು ವೈದ್ಯರ ಪ್ರಿಸ್ಕ್ರಿಪ್ಷನ್ ಹಾಗೂ ಅಗತ್ಯ ದಾಖಲೆಗಳಿಲ್ಲದೆ ಮಾರಾಟ ಮಾಡಬಾರದು ಎಂದು ಮೆಡಿಕಲ್ ಮಾಲೀಕರು ಮತ್ತು ಸಿಬ್ಬಂದಿಗೆ ಸೂಚನೆ ನೀಡಲಾಯಿತು. ಅಲ್ಲದೆ, ಸಂಬಂಧಿತ ಕಾನೂನು ಹಾಗೂ ಔಷಧ ಮಾರಾಟಕ್ಕೆ ಸಂಬಂಧಿಸಿದ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಧಿಕಾರಿಗಳು ನಿರ್ದೇಶನ ನೀಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!