ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಕೋಲ್ನಾಡ್‌ನಲ್ಲಿ ನಿಲ್ಲಿಸಿದ್ದ ಲಾರಿಗೆ ಬೈಕ್ ಡಿ*ಕ್ಕಿ: ಬೈಕ್ ಸವಾರ ಸಾ*ವು…..!

ರಾಷ್ಟ್ರೀಯ ಹೆದ್ದಾರಿ 66ರ ಕೋಲ್ನಾಡ್ ಭಾರತ್ ಬೆಂಜ್ ಶೋ ರೂಮ್ ಬಳಿ ಏಕಾಏಕಿ ನಿಲ್ಲಿಸಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಸವಾರ ಮೃತಪಟ್ಟಿರುವ ಘಟನೆ ನಡೆದಿದೆ.

ಮೃಪಟ್ಟವರನ್ನು ಮಂಗಳೂರು ನಗರದ ಪಂಜಿಮೊಗರು ತ್ರಿಶಾ ಕಾಲೇಜ್ ಬಳಿಯ ಉರಂದಾಡಿ ಗುಡ್ಡೆ ಪಡುಕೋಡಿ ನಿವಾಸಿ ಆರ್ ಸ್ವಾಮಿನಾಥನ್ ಎಂದು ಗುರುತಿಸಲಾಗಿದೆ. ಮುಂಬೈನಿಂದ ತಿರುವನಂತಪುರಕ್ಕೆ ಸರಕುಗಳನ್ನು ಸಾಗಿಸುತ್ತಿದ್ದ ಲಾರಿ ಮುಲ್ಕಿ ಸಮೀಪದ ಕೋಲ್ಕಾಡ್ ಭಾರತ್ ಬೆಂಜ್ ಶೋ ರೂಮ್ ತಲುಪುತ್ತಿದ್ದಂತೆ ಅದರ ಚಾಲಕ ವಿನುರಾಜ್ ಎಂಬಾತ ಏಕಾಏಕಿ ಲಾರಿ ನಿಲುಗಡೆಗೊಳಿಸಿದ್ದ ಎನ್ನಲಾಗಿದೆ.

ಆ ವೇಳೆ ಮಂಗಳೂರು ಕಡೆಗೆ ಹೋಗುತ್ತಿದ್ದ ಬೈಕ್ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಆರ್ ಸ್ವಾಮಿನಾಥನ್‌ರವರಿಗೆ ಗಂಭೀರ ಗಾಯಗಳಾಗಿದ್ದು ಕೂಡಲೇ ಸ್ಥಳೀಯರು ಮುಕ್ಕ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಅಪಘಾತದಿಂದ ಕೆಲ ಹೊತ್ತು ಹೆದ್ದಾರಿ ಸಂಚಾರ ಅಸ್ತವ್ಯಸ್ತವಾಗಿತ್ತು. ಸ್ಥಳಕ್ಕೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಹಾಗೂ ಹೆದ್ದಾರಿ ಇಲಾಖೆಯ ಸಿಬ್ಬಂದಿ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಎರಡು ವಾಹನಗಳನ್ನು ಸ್ಥಳದಿಂದ ತೆರವುಗೊಳಿಸಿದ್ದಾರೆ. ಮೃತರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಲಾರಿ ಚಾಲಕ ವಿನುರಾಜ್ ವಿರುದ್ಧ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!