ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಸುರಿಯುತ್ತಿರುವ ಭಾರೀ ಗಾಳಿ-ಮಳೆಯ ಪರಿಣಾಮ ಐದು ಮನೆಗಳಿಗೆ ಹಾನಿ….!

ಬಂಟ್ವಾಳ ತಾಲೂಕಿನಲ್ಲಿ ಸುರಿಯುತ್ತಿರುವ ಭಾರೀ ಗಾಳಿ-ಮಳೆಯ ಪರಿಣಾಮ ವಿವಿಧ ಗ್ರಾಮಗಳಲ್ಲಿ ಐದು ಮನೆಗಳಿಗೆ ಭಾಗಶಃ ಹಾನಿಯಾಗಿದೆ.

ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಅಮ್ಮುಂಜೆ ಗ್ರಾಮದ ನೆಫಿಸಾ ಕೋಂ ಹಾಮದ್ ಅವರ ಮನೆಗೆ ಭಾಗಶಃ ಹಾನಿಯಾಗಿದೆ. ಮುಡೈಕೋಡಿಕುಳ ಗ್ರಾಮದ ಮೋಂಟೆಮಾರು ನಿವಾಸಿ ಗಿರಿಜ ಕೋಂ ಬಾಬು ಗೌಡ ಅವರ ವಾಸ್ತವ್ಯದ ಮನೆಗೆ ಹೊಂದಿಕೊಂಡಿದ್ದ ಶೀಟ್ ಅಳವಡಿಸಿದ ಉಪಕಟ್ಟಡ ಗಾಳಿ-ಮಳೆಯಿಂದ ಹಾನಿಗೊಳಗಾಗಿದೆ.

ಕನ್ಯಾನ ಗ್ರಾಮದ ಪನೆಯಡ್ಕ ನಿವಾಸಿ ಹರಿಣಾಕ್ಷಿ ಕೋಂ ಲಕ್ಷ್ಮಣ ಗೌಡ ಅವರ ಕಚ್ಚಾ ಮನೆ ಮೇಲೆ ಮರ ಬಿದ್ದು ಭಾಗಶಃ ಹಾನಿಯಾಗಿದೆ. ಪುದು ಗ್ರಾಮದ ಅಮ್ಮೇಮಾರ್ ಎಂಬಲ್ಲಿ ಇಕ್ಬಾಲ್ ಹಸಿರ್ ಅವರ ಮನೆ ಮಳೆಯಿಂದ ಭಾಗಶಃ ಹಾನಿಗೊಳಗಾಗಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಪಾಣೆಮಂಗಳೂರು ಗ್ರಾಮದ ಬೋಳಂಗಡಿ ಕೋಡಿ ಎಂಬಲ್ಲಿ ಸಾವಿತ್ರಿ ಕೋಂ ರವಿ ಅವರ ಮನೆಯ ಹಿಂಭಾಗದ ಬರೆ ಜರಿದು ಮಣ್ಣು ಬಿದ್ದ ಪರಿಣಾಮ ಮನೆಗೆ ಭಾಗಶಃ ಹಾನಿಯಾಗಿದೆ. ನಿರಂತರ ಮಳೆಯ ಹಿನ್ನೆಲೆಯಲ್ಲಿ ಹಾನಿಗೊಳಗಾದ ಸ್ಥಳಗಳಿಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಂದಿನ ದಿನಗಳಲ್ಲೂ ಭಾರೀ ಮಳೆಯ ಮುನ್ಸೂಚನೆ ಇರುವುದರಿಂದ ತಗ್ಗು ಪ್ರದೇಶಗಳು ಹಾಗೂ ಗುಡ್ಡದ ಆಸುಪಾಸಿನ ನಿವಾಸಿಗಳು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!