ಜನ ಮನದ ನಾಡಿ ಮಿಡಿತ

Advertisement

ಬ್ಯಾಂಕಾಕ್: ಬ್ಯಾಂಕಾಕ್‌ನ ಪಬ್‌ನಲ್ಲಿ ಭೀಕರ ಅಗ್ನಿ ಅವಘಡ; 27 ಜನ ಮೃ*ತ್ಯು…!

ಪಬ್ ಒಂದರಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿ, ಕನಿಷ್ಠ 27 ಜನ ಸಾವನ್ನಪ್ಪಿ, 63 ಜನರು ಗಾಯಗೊಂಡಿರುವ ಘಟನೆ ಥೈಲ್ಯಾಂಡ್ ರಾಜಧಾನಿಯ ಬ್ಯಾಂಕಾಕ್‌ನಲ್ಲಿ ಸೋಮವಾರ ಬೆಳಗಿನ ಜಾವ ಸಂಭವಿಸಿದೆ.

ನಗರದ ಉತ್ತರ ಭಾಗದ ಚತುಚಕ್ ಜಿಲ್ಲೆಯ ರೋಂಗ್ ಬೀರ್ ನಾ ಲಾಟ್ ಫ್ರಾವೊ ಪಬ್‌ವೊಂದರಲ್ಲಿ ಮಧ್ಯರಾತ್ರಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಭಾರಿ ಬೆಂಕಿ ಮತ್ತು ವಿಷಕಾರಿ ಹೊಗೆಯೊಳಗೆ ಸಿಲುಕಿ ಕನಿಷ್ಠ 27 ಮಂದಿ ಸಾವನ್ನಪ್ಪಿದ್ದಾರೆ. ಗಾಯಗೊಂಡ 63 ಜನರ ಪೈಕಿ 22 ಜನರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆಯ ಸಂಪೂರ್ಣ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ವಿಡಿಯೋದಲ್ಲಿ ನೈಟ್‌ಕ್ಲಬ್‌ನ ಮುಖ್ಯ ಬಾಗಿಲಿನಿಂದ ಬೆಂಕಿಯ ಜ್ವಾಲೆಗಳು ಮತ್ತು ದಟ್ಟವಾದ ಕಪ್ಪು ಹೊಗೆ ಆಕಾಶ ಮುಟ್ಟುತ್ತಿರುವುದು ಹಾಗೂ ಪ್ರಾಣ ಉಳಿಸಿಕೊಳ್ಳಲು ಯುವಕ-ಯುವತಿಯರು ದಿಕ್ಕಾಪಾಲಾಗಿ ಓಡುತ್ತಿರುವುದನ್ನು ಕಾಣಬಹುದಾಗಿದೆ. ಘಟನಾ ಸ್ಥಳಕ್ಕೆ ಥೈಲ್ಯಾಂಡ್ ಪ್ರಧಾನಿ ಅನುಟಿನ್ ಚಾರ್ನ್ವಿರಕುಲ್ ಭೇಟಿ ನೀಡಿದ್ದು, “27 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿ ಅವಘಡಕ್ಕೆ ಕಾರಣವೇನು ಎಂಬ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ” ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!