ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ಶಾಖೆಯಲ್ಲಿ ಕಳ್ಳತನಕ್ಕೆ ಯತ್ನ…!

ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ಮಿನೇಜಸ್ ಪ್ಲಾಜಾದಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ಕಳ್ಳತನದ ಯತ್ನ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಬ್ಯಾಂಕ್ ಶಾಖೆಯ ಮೇಲಿರುವ ಕೊಠಡಿಯ ಸ್ಲ್ಯಾಬ್‌ಗೆ ತೂತು ಮಾಡಿ ಒಳನುಗ್ಗಲು ಯತ್ನಿಸಿರುವುದು ಪತ್ತೆಯಾಗಿದೆ. ಆದರೆ ಬ್ಯಾಂಕ್‌ನಿಂದ ಯಾವುದೇ ಹಣ ಅಥವಾ ಇತರೆ ವಸ್ತುಗಳು ಕಳವಾಗಿರುವ ಬಗ್ಗೆ ಈವರೆಗೆ ಮಾಹಿತಿ ಲಭ್ಯವಾಗಿಲ್ಲ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ. ಅರುಣ್ ಕುಮಾರ್, ಬಂಟ್ವಾಳ ನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಅನಂತ ಪದ್ಮನಾಭ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಎಸ್.ಐ. ಮಂಜುನಾಥ್ ಹಾಗೂ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದು, ತನಿಖೆ ಪೂರ್ಣಗೊಂಡ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗುವ ನಿರೀಕ್ಷೆಯಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!