ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ನಾಲ್ವರು ಅಪ್ರಾಪ್ತ ಬಾಲಕರು ಸಹಿತ 11 ಮಂದಿ ಬಾಂಗ್ಲಾ ಪ್ರಜೆಗಳ ಬಂಧನ..!

ಮಂಗಳೂರು ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೆಲೆಸಿ ಎರಡು ಕಡೆ ಕಟ್ಟಡ ನಿರ್ಮಾಣ ಕೆಲಸ ಮಾಡುತ್ತಿದ್ದ ನಾಲ್ವರು ಅಪ್ರಾಪ್ತ ಬಾಲಕರು ಸಹಿತ 11 ಮಂದಿ ಬಾಂಗ್ಲಾ ಪ್ರಜೆಗಳನ್ನು ಸಿಸಿಬಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಮುಹಮ್ಮದ್ ಕೌಸರ್ ಅಲಿ, ಮುಹಮ್ಮದ್ ನೂರ್ ಅಮೀನ್, ಮುಹಮ್ಮದ್ ನಾಹಿದುಲ್ ಇಸ್ಲಾಂ, ಮುಹಮ್ಮದ್ ಹುಮಾಯೂನ್ ಕಬೀರ್, ಮುಹಮ್ಮದ್ ರಂಝಾನ್ ಅಲಿ, ಮುಹಮ್ಮದ್ ಅಬ್ದುಲ್ ರಹ್ಮಾನ್ ರಾಯಲ್, ಮುಹಮ್ಮದ್ ನೋಯಾನ್ ಮತ್ತು ನಾಲ್ವರು ಅಪ್ರಾಪ್ತರನ್ನು ಪೊಲೀಸರು ಬಂಧಿಸಿದ್ದಾರೆ. ಒಂದು ಕಡೆ ಮೂವರು ಹಾಗೂ ಮತ್ತೊಂದು ಕಡೆಯಲ್ಲಿ ಎಂಟು ಮಂದಿ ಬಾಂಗ್ಲಾ ಪ್ರಜೆಗಳು ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಬಾಂಗ್ಲಾ ಪ್ರಜೆಗಳನ್ನು ಅವರ ಸ್ವದೇಶಕ್ಕೆ ಗಡಿಪಾರು ಮಾಡಲು ಅಗತ್ಯವಿರುವ ಆದೇಶ ಕೋರಿ ವಿದೇಶೀಯರ ಪ್ರಾದೇಶಿಕ ನೋಂದಣಿ ಕಚೇರಿಗೆ ಶೀಘ್ರದಲ್ಲೇ ವರದಿ ಸಲ್ಲಿಸಲಾಗುವುದು. ಸದ್ಯ ಬಂಧಿತರ ಬಳಿ ಇರುವ ದಾಖಲೆಗಳ ಸಂಗ್ರಹಣೆ ಹಾಗೂ ಪರಿಶೀಲನಾ ಪ್ರಕ್ರಿಯೆ ನಡೆಯುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕೆಲವು ದಿನಗಳ ಹಿಂದೆ ಸುರತ್ಕಲ್‌ನಲ್ಲಿ ಅಕ್ರಮವಾಗಿ ನೆಲೆಸಿದ್ದ 8 ಮಂದಿಯನ್ನು ಪೊಲೀಸರು ಬಂಧಿಸಿದ್ದು, ಇದರೊಂದಿಗೆ ಒಟ್ಟು 19 ಮಂದಿ ಬಾಂಗ್ಲಾ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ. ಏತನ್ಮಧ್ಯೆ ಮಧ್ಯವರ್ತಿ ವಿರುದ್ಧ ಪ್ರಕರಣ ದಾಖಲಿಸಲು ಸಿದ್ಧತೆಮಾಡಲಾಗಿದೆ. ಭಾರತದ ಇತರ ರಾಜ್ಯಗಳ ಕಾರ್ಮಿಕರ ಜೊತೆಯಲ್ಲಿ ಈ ಬಾಂಗ್ಲಾ ಪ್ರಜೆಗಳನ್ನು ಮಂಗಳೂರಿಗೆ ಕರೆತಂದು ಕೆಲಸಕ್ಕೆ ಸೇರಿಸಿದ್ದ ಪಶ್ಚಿಮ ಬಂಗಾಳ ಮೂಲದ ಮಧ್ಯವರ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!