ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಕಾಂಚನಾ ಟೆಕ್ಸ್ಟೈಲ್ಸ್ ಮ್ಯಾನೇಜರ್ ದಿನೇಶ್ ರಾಜ್ ಕೊಲೆ ಪ್ರಕರಣದ ಆರೋಪಿ ಬಂಧನ..!

ಕಾಂಚನಾ ಟೆಕ್ಸ್ಟೈಲ್ಸ್ ಮ್ಯಾನೇಜರ್ ದಿನೇಶ್ ರಾಜ್ ಕೊಲೆ ಪ್ರಕರಣ ಸೇರಿದಂತೆ ಒಟ್ಟು ಆರು ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ಕಳೆದ 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಶಾಹುಲ್ ಹಮೀದ್ ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ದಿನೇಶ್ ರಾಜ್ ಕೊಲೆ ಪ್ರಕರಣ ಸೇರಿದಂತೆ ಮೂರು ಪ್ರಮುಖ ಪ್ರಕರಣಗಳಲ್ಲಿ ನ್ಯಾಯಾಲಯವು ಈತನ ವಿರುದ್ಧ ಈಗಾಗಲೇ ವಾರಂಟ್ ಹೊರಡಿಸಿತ್ತು. ಆರೋಪಿ ಸಾಹುಲ್ ಹಮೀದ್ ವಿರುದ್ಧ ಕಿಡ್ನಾಪ್, ಸುಲಿಗೆ, ಸರಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ಹಾಗೂ ಕೊಲೆ ಯತ್ನ ಸೇರಿದಂತೆ ಹಲವು ಗಂಭೀರ ಪ್ರಕರಣಗಳು ದಾಖಲಾಗಿವೆ. ಈತನ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ 3, ಮಂಗಳೂರು ಗ್ರಾಮಾಂತರದಲ್ಲಿ 1, ಉತ್ತರ ಪೊಲೀಸ್ ಠಾಣೆಯಲ್ಲಿ 1 ಹಾಗೂ ಬರ್ಕೆ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ ದಾಖಲಾಗಿದೆ. ಬರ್ಕೆ ಠಾಣೆಯಲ್ಲಿ ದಾಖಲಾದ ಐಪಿಸಿ 307 ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ಶಾಹುಲ್ ಹಮೀದ್ ಜೈಲಿನಲ್ಲಿದ್ದ ಸಂದರ್ಭದಲ್ಲಿಯೇ ಶಶಿಕಿರಣ್ ಎಂಬಾತನ ಕೊಲೆಗೆ ಯತ್ನಿಸಿದ ಆರೋಪ ಈತನ ಮೇಲಿದೆ. ಈ ಹಿಂದೆ ನರಸಿಂಹ ಶೆಟ್ಟಿಗಾರ್ ಹಾಗೂ ಪೊಳಲಿ ಅನಂತ ಮೂರ್ತಿ ಕೊಲೆ ಪ್ರಕರಣಗಳಲ್ಲಿ ಭಾಗಿಯಾದ ಆರೋಪ ಹೊಂದಿದ್ದರೂ, ಬಳಿಕ ನ್ಯಾಯಾಲಯದಿಂದ ಖುಲಾಸೆಗೊಂಡಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!