ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಒಮಾನ್ ಸಮೀಪ ವಾಣಿಜ್ಯ ಹಡಗಿನ ಮೇಲಿನ ದಾಳಿ; ಬಂಟ್ವಾಳದ ಯುವಕ ಸೇಫ್…!

ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಒಮಾನ್ ಕರಾವಳಿ ಸಮೀಪ ಸಂಚರಿಸುತ್ತಿದ್ದ ವಾಣಿಜ್ಯ ಹಡಗೊಂದರ ಮೇಲೆ ನಡೆದ ದಾಳಿಯ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಯುವಕ ಅಪಾಯದಿಂದ ಪಾರಾಗಿರುವ ಘಟನೆ ಬೆಳಕಿಗೆ ಬಂದಿದೆ.

ಯುವಕ ಸುರಕ್ಷಿತರಾಗಿದ್ದು, ಶೀಘ್ರದಲ್ಲೇ ಭಾರತಕ್ಕೆ ಮರಳುವ ನಿರೀಕ್ಷೆಯಲ್ಲಿ ಕುಟುಂಬದವರು ಕಾಯುತ್ತಿದ್ದಾರೆ. ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ ಬಿಳಿಯೂರು ನಿವಾಸಿ ರಚನ್ ಅವರು ಕಳೆದ ಹಲವು ವರ್ಷಗಳಿಂದ ವಾಣಿಜ್ಯ ಹಡಗಿನಲ್ಲಿ ಉದ್ಯೋಗ ನಿರ್ವಹಿಸುತ್ತಿದ್ದಾರೆ. ಇತ್ತೀಚೆಗೆ ಅವರು ಕರ್ತವ್ಯದಲ್ಲಿದ್ದ ಹಡಗು ಒಮಾನ್ ಕರಾವಳಿ ಸಮೀಪ ಸಾಗುತ್ತಿದ್ದ ವೇಳೆ ದಾಳಿ ಸಂಭವಿಸಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಘಟನೆಯ ಕುರಿತು ಯುವಕ ಕುಟುಂಬ ಸದಸ್ಯರಿಗೆ ನೀಡಿದ ಮಾಹಿತಿಯ ಪ್ರಕಾರ, ಹಡಗು ತನ್ನ ಗಮ್ಯಸ್ಥಾನದತ್ತ ಸಾಗುತ್ತಿದ್ದ ವೇಳೆ ಭಾರೀ ಸ್ಫೋಟದ ಶಬ್ದ ಕೇಳಿಬಂದಿದ್ದು, ಅದರ ಪರಿಣಾಮವಾಗಿ ಎಂಜಿನ್ ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪರಿಸ್ಥಿತಿ ಕ್ಷಣಾರ್ಧದಲ್ಲಿ ಗಂಭೀರ ಸ್ವರೂಪ ಪಡೆದ ಕಾರಣ ಸಿಬ್ಬಂದಿಯ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಎಲ್ಲರನ್ನೂ ತುರ್ತು ಕ್ರಮವಾಗಿ ಜೀವ ರಕ್ಷಕ ದೋಣಿಗಳ ಮೂಲಕ ಹಡಗಿನಿಂದ ಸ್ಥಳಾಂತರಿಸಲಾಯಿತು ಎಂದು ತಿಳಿದುಬಂದಿದೆ. ಹಡಗಿನಲ್ಲಿದ್ದ ಸಿಬ್ಬಂದಿ ತಕ್ಷಣವೇ ಸಂಬಂಧಿತ ಸಮುದ್ರ ಭದ್ರತಾ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಬಳಿಕ ಒಮಾನ್ ನೌಕಾಪಡೆಯು ಸ್ಥಳಕ್ಕೆ ಆಗಮಿಸಿ ಎಲ್ಲರನ್ನು ಸುರಕ್ಷಿತವಾಗಿ ರಕ್ಷಿಸಿ ತನ್ನ ನೆಲೆಗೆ ಕರೆದೊಯ್ದಿದೆ. ಸದ್ಯ ಸಿಬ್ಬಂದಿ ಕಂಪನಿಯ ಮೇಲ್ವಿಚಾರಣೆಯಲ್ಲಿ ಸುರಕ್ಷಿತರಾಗಿದ್ದು, ಅಗತ್ಯ ವೈದ್ಯಕೀಯ ತಪಾಸಣೆ ಹಾಗೂ ಇತರೆ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!