ಜನ ಮನದ ನಾಡಿ ಮಿಡಿತ

Advertisement

ಬೆಳಗಾವಿ: ರಮ್ಮಿ ಆಡುತ್ತಿದ್ದ ವ್ಯಕ್ತಿಯ ಮೇಲೆ ಫೈರಿಂಗ್..!

ಬೆಳಗಾವಿಯ ಪೊಲೀಸ್ ಕಮೀಷನರ್ ಕಚೇರಿ ಪಕ್ಕದಲ್ಲೇ ಕ್ಲಬ್ ನಲ್ಲಿ ರಮ್ಮಿ ಆಡುತ್ತಿದ್ದ ವ್ಯಕ್ತಿಯ ಮೇಲೆ ಫೈರಿಂಗ್ ನಡೆದಿದೆ.

ಬೆಳಗಾವಿ ನಗರದ ಜಿಮಖಾನ್ ಕ್ಲಬ್‌ನಲ್ಲಿ ದುಷ್ಕರ್ಮಿಗಳು ಸುರೇಶ್ ಜಾಲಗಾರ ಎಂಬಾತನ ತಲೆಗೆ ಗನ್ ನಿಂದ ಕುಕ್ಕಿ ಬಳಿಕ ಫೈರಿಂಗ್ ನಡೆಸಿದ್ದಾರೆ. ಫೈರಿಂಗ್ ಆಗುವ ಮುನ್ನವೇ ಸುರೇಶ್ ದುಷ್ಕರ್ಮಿಗಳನ್ನು ತಳ್ಳಿ ಎಸ್ಕೇಪ್ ಆಗಿದ್ದಾರೆ. ಸುರೇಶ್ ಪರಾರಿಯಾದ ಬಳಿಕ ಹೊರ ಬಂದು ದುಷ್ಕರ್ಮಿಗಳು ಮತ್ತೆ ಎರಡು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ದುಷ್ಕರ್ಮಿಗಳ ಐದು ಜನರ ತಂಡ ಜಿಮ್ ಖಾನ ಕ್ಲಬ್ ಗೆ ಬಂದಿತ್ತು. ಇಬ್ಬರು ಹೊರ ನಿಂತಿದ್ದರೆ, ಮೂರು ಜನರು ಒಳ ಬಂದು ಹತ್ಯೆಗೆ ಯತ್ನ ನಡೆಸಿದ್ದರು. ಸ್ಥಳಕ್ಕೆ ಪೊಲೀಸ್ ಕಮೀಷನರ್ ಭೂಷಣ್ ಬೊರಸೆ ಭೇಟಿ ನೀಡಿ ಘಟನೆ ಬಗ್ಗೆ ಮಾಹಿತಿ ಪಡೆದಿದ್ದಾರೆ. ಪ್ರಫುಲ್ ಪಾಟೀಲ್ ಎಂಬಾತನ ಮೇಲೆ ಈ ಹಿಂದೆ ಸುರೇಶ್ ಜಾಲಗಾರ ಫೈರಿಂಗ್ ಮಾಡಿದ್ದ. ಇದರ ಸೇಡು ತೀರಿಸಿಕೊಳ್ಳಲು ಇಂದು ಪ್ರಫುಲ್ ಪಾಟೀಲ್ ತನ್ನ ಕಡೆಯ ಹುಡುಗರಿಂದ ಹತ್ಯೆಗೆ ಯತ್ನ ಮಾಡಿದ್ದಾರೆನ್ನಲಾಗಿದೆ. ಕ್ಯಾಂಪ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!