ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಅತ್ತಳಿಕೆ ಪ್ರದೇಶದಲ್ಲಿ ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ; ಕಾರ್ಮಿಕ ಮೃ*ತ್ಯು….!

ಬಂಟ್ವಾಳ ಸಮೀಪದ ದೇವಸ್ಯಪಡೂರು ಗ್ರಾಮದ ಅಲ್ಲಿಪಾದೆ ಬಳಿಯ ಅತ್ತಳಿಕೆ ಪ್ರದೇಶದಲ್ಲಿ ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ ಕಾರ್ಮಿಕನೋರ್ವ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಮೃತರನ್ನು ಕಾವಳಪಡೂರು ನಿವಾಸಿ ಪ್ರಮೋದ್ ಎಂದು ಗುರುತಿಸಲಾಗಿದೆ. ಲಾರಿ ಚಾಲಕ ಸುನಿಲ್ ಹಾಗೂ ವಿಜಯ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಕಲ್ಲಿನ ಕೋರೆಯಿಂದ ಕೆಂಪುಕಲ್ಲು ತುಂಬಿಸಿಕೊಂಡು ಬರುತ್ತಿದ್ದ ವೇಳೆ ಲಾರಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಸ್ಥಳೀಯರ ಮಾಹಿತಿ ಪ್ರಕಾರ ಬ್ರೇಕ್ ವೈಫಲ್ಯ ಸಂಭವಿಸಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ಅಪಘಾತದ ನಿಖರ ಕಾರಣವು ಪೊಲೀಸ್ ತನಿಖೆಯ ಬಳಿಕವೇ ಸ್ಪಷ್ಟವಾಗಲಿದೆ. ಲಾರಿ ಸಂಪೂರ್ಣ ಮಗುಚಿ ಬಿದ್ದ ಪರಿಣಾಮ ಅದರಡಿ ಸಿಲುಕಿದ್ದ ಪ್ರಮೋದ್ ಹಾಗೂ ಕೃಷ್ಣಪ್ಪ ಅವರನ್ನು ಜೆಸಿಬಿ ಯಂತ್ರದ ಸಹಾಯದಿಂದ ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಪ್ರಮೋದ್ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಟ್ರಾಫಿಕ್ ಪೊಲೀಸ್ ಠಾಣೆಯ ಎಸ್‌ಐ ಆದರ್ಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!