ಬಂಟ್ವಾಳ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ವಾಹನಗಳಿಗೆ ಹಾಗೂ ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಫಾತಿಮಾ, ಅವರ ಮಗಳು ಸಲ್ಮೀಯಾ ಹಾಗೂ ಶೌಕತ್ ಅಲಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನೆಯ ಸಂಬಂಧ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.



