ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಬಂಟ್ವಾಳ ಲಾವಣ್ಯ ಹತ್ಯೆ ಪ್ರಕರಣ: ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ನಡೆದ ದಾರುಣ ಕೊಲೆ…!

ಬಿ.ಸಿ.ರೋಡ್ ನಲ್ಲಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯೊಬ್ಬರನ್ನು ಮಾರಕವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ ಘಟನೆ ಗುರುವಾರ ವರದಿಯಾಗಿದೆ.

ಮೃತ ಯುವತಿಯನ್ನು ಕಕ್ಯಪದವು ನಿವಾಸಿ ಲಾವಣ್ಯ ಎಂದು ಗುರುತಿಸಲಾಗಿದೆ. ಅವರು ಕಲ್ಲಡ್ಕದ ಖಾಸಗಿ ನರ್ಸಿಂಗ್ ಹೋಮ್‌ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಲಭ್ಯವಿರುವ ಪ್ರಾಥಮಿಕ ಮಾಹಿತಿಯ ಪ್ರಕಾರ, ಲಾವಣ್ಯ ಅವರು ಕಕ್ಯಪದವು ಕಡೆಗೆ ತೆರಳಲು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಕುಳಿತಿದ್ದರು ಎನ್ನಲಾಗಿದೆ. ಈ ವೇಳೆ ಅವರು ತಮ್ಮ ಸಂಬಂಧಿಕರೊಬ್ಬರಿಗೆ ದೂರವಾಣಿ ಕರೆ ಮಾಡಿ, “ತನ್ನ ಪಕ್ಕದಲ್ಲಿ ಓರ್ವ ಯುವಕ ಕುಳಿತಿದ್ದಾನೆ” ಎಂದು ತಿಳಿಸಿದ್ದು, ಬಳಿಕ ಕರೆ ಸಂಪರ್ಕ ಕಡಿತಗೊಂಡಿದೆ ಎಂದು ಹೇಳಲಾಗಿದೆ. ಬಸ್‌ನಲ್ಲಿದ್ದ ಪ್ರಯಾಣಿಕರ ಮಾಹಿತಿ ಪ್ರಕಾರ, ಬಳಿಕ ಯುವತಿ ಬಸ್‌ನಿಂದ ಕೆಳಗಿಳಿದಿದ್ದಾರೆ. ಅವರು ಇಳಿದ ತಕ್ಷಣ ಯುವಕ ಆಕೆಯನ್ನು ಬೆನ್ನಟ್ಟಿದನು ಎನ್ನಲಾಗಿದ್ದು, ತನ್ನ ಬ್ಯಾಗ್‌ನಿಂದ ಹರಿತವಾದ ಆಯುಧವನ್ನು ಹೊರತೆಗೆದಾಗ ಯುವತಿ ಓಡಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಈ ವೇಳೆ ಯುವತಿಯ ಮೇಲೆ ಮಾರಕ ಹಲ್ಲೆ ನಡೆಸಿ, ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಘಟನೆಯಿಂದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮಾಹಿತಿ ತಿಳಿಯುತ್ತಿದ್ದಂತೆಯೇ ಬಂಟ್ವಾಳ ಉಪವಿಭಾಗದ ಪೊಲೀಸ್ ಅಧಿಕಾರಿಗಳು, ನಗರ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯ ಪತ್ತೆಗಾಗಿ ವ್ಯಾಪಕ ಶೋಧ ಕಾರ್ಯ ಆರಂಭಿಸಿದ್ದು, ಘಟನೆಯ ನಿಖರ ಕಾರಣ ಮತ್ತು ಹಿನ್ನೆಲೆಯ ಕುರಿತು ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!