ಲಾವಣ್ಯ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಪರಾರಿಯಾಗಿದ್ದ ಪ್ರಮುಖ ಆರೋಪಿ ಚೇತನ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಶಕ್ಕೆ ಪಡೆದ ಬಳಿಕ ಆರೋಪಿಯನ್ನು ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಲೆ ಕೃತ್ಯ ಎಸಗಿದ ಬಳಿಕ ಆತ ವಿಷಪದಾರ್ಥ ಸೇವಿಸಿರಬಹುದೆಂಬ ಅನುಮಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸದ್ಯ ಆರೋಪಿಯ ಆರೋಗ್ಯ ಸ್ಥಿತಿ ಕುರಿತು ವೈದ್ಯರು ನಿಗಾ ವಹಿಸಿದ್ದು, ಪರೀಕ್ಷೆಯ ವರದಿ ಬಂದ ಬಳಿಕ ಸ್ಪಷ್ಟ ಚಿತ್ರಣ ಲಭ್ಯವಾಗುವ ಸಾಧ್ಯತೆಯಿದೆ. ಇನ್ನೊಂದೆಡೆ, ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದು, ಕೊಲೆ ನಡೆದ ಸಂದರ್ಭದ ವಿವರಗಳು, ಆರೋಪಿಯ ಚಲನವಲನಗಳು ಹಾಗೂ ಘಟನೆಯ ಹಿನ್ನಲೆ ಕುರಿತು ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ವೈದ್ಯಕೀಯ ವರದಿ ಮತ್ತು ಆರೋಪಿಯ ವಿಚಾರಣೆಯ ಬಳಿಕ ಪ್ರಕರಣಕ್ಕೆ ಸಂಬAಧಿಸಿದ ಮತ್ತಷ್ಟು ಮಹತ್ವದ ಮಾಹಿತಿಗಳು ಬಹಿರಂಗವಾಗುವ ಸಾಧ್ಯತೆ ಇದೆ.



