ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ ವೇಳೆ ಬೆಳಕಿಗೆ ಬಂದಿದೆ.

ಸೂರಿಕುಮೇರ್ ಪೆಟ್ರೋಲ್ ಬಂಕ್ ಬಳಿಯ ಹೋಟೆಲ್ ಮುಂಭಾಗದಲ್ಲಿ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಉರುಳಿತು. ಕಾರಿನೊಳಗೆ ಮಗು, ಮಹಿಳೆ ಹಾಗೂ ಚಾಲಕ ಸಿಲುಕಿಕೊಂಡಿದ್ದರು. ಕ್ಷಣಾರ್ಧದಲ್ಲಿ ನೆರವು ಸಿಗದಿದ್ದರೆ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುವ ಸಾಧ್ಯತೆ ಇತ್ತು. ಅದೇ ಸಮಯದಲ್ಲಿ ಸಮೀಪದಲ್ಲೇ ಮತ್ತೊಂದು ಪ್ರಮುಖ ಪ್ರಕರಣದ ಸಂಬಂಧ ಕರ್ತವ್ಯ ನಿರ್ವಹಿಸುತ್ತಿದ್ದ ವಿಟ್ಲ ಪೊಲೀಸ್ ಠಾಣೆಯ ಉಪನಿರೀಕ್ಷಕ ರಾಮಕೃಷ್ಣ ಹಾಗೂ ಸಿಬ್ಬಂದಿ ಕರಣಾಕರ ಅವರಿಗೆ ಅಪಘಾತದ ಭಾರೀ ಶಬ್ದ ಕೇಳಿಬಂದ ತಕ್ಷಣ ಯಾವುದೇ ಕ್ಷಣವನ್ನೂ ವ್ಯರ್ಥ ಮಾಡದೆ ಸ್ಥಳಕ್ಕೆ ಧಾವಿಸಿದ್ದಾರೆ. ಪ್ರಾಣದ ಹಂಗು ತೊರೆದು ಕಾರಿನೊಳಗೆ ಸಿಲುಕಿದ್ದ ಮಗು, ಮಹಿಳೆ ಹಾಗೂ ಚಾಲಕನನ್ನು ಸುರಕ್ಷಿತವಾಗಿ ಹೊರತೆಗೆದು ರಕ್ಷಿಸುವಲ್ಲಿ ಎಸ್‌ಐ ರಾಮಕೃಷ್ಣ ಅವರು ಅಸಾಧಾರಣ ಸಮಯಪ್ರಜ್ಞೆ ಮತ್ತು ಧೈರ್ಯ ಪ್ರದರ್ಶಿಸಿದ್ದಾರೆ. ವಿಶೇಷವಾಗಿ ಅಳುತ್ತಿದ್ದ ಪುಟ್ಟ ಮಗುವನ್ನು ತಮ್ಮ ಕೈಯಲ್ಲಿ ಎತ್ತಿಕೊಂಡು ಸುರಕ್ಷಿತ ಸ್ಥಳಕ್ಕೆ ಕರೆತಂದ ದೃಶ್ಯ ಸಮೀಪದ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಅದನ್ನು ಕಂಡ ಸಾರ್ವಜನಿಕರು ಪೊಲೀಸ್ ಅಧಿಕಾರಿಯ ಮಾನವೀಯತೆಗೆ ಮನಸಾರೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!