ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ ನಿಧನರಾದರು.

ತಿರುಪತಿ ಯಾತ್ರೆ ಮುಗಿಸಿ ಸೋಮವಾರ ಮಂತ್ರಾಲಯದತ್ತ ಸಂಚರಿಸುತ್ತಿದ್ದಾಗ ಮಂತ್ರಾಲಯ ಸಮೀಪವಾಗುತ್ತಿದಂತೆ ಕೇವಲ ಒಂದೆರಡು ಕಿಲೋಮೀಟರ್ ಅಂತರದಲ್ಲಿ ರವಿ ಶೆಟ್ಟಿಯವರು ಚಲಾಯಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಅದೇ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪುರುಷೋತ್ತಮ ಭಂಡಾರಿ, ಸುದೇಶ್ ರೈ ಮತ್ತು ಪ್ರದೀಪ್ ಆಳ್ವ ಪ್ರಾಣಾಪಾಯದಿಂದ ಪಾರಾಗಿದ್ದು, ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರವಿ ಶೆಟ್ಟಿ ಅಶೋಕ್ ನಗರ ಅವರು ಮಂಗಳೂರು ಹಾಪ್ ಕಾಮ್ಸ್ ಉದ್ಯೋಗಿಯಾಗಿದ್ದು, ಯಕ್ಷದ್ರುವ ಪಟ್ಲ ಫೌಂಡೇಶನ್‌ನ ಜೊತೆ ಕಾರ್ಯದರ್ಶಿಯಾಗಿದ್ದರು. ಮಾತ್ರವಲ್ಲದೆ, ಹಲವಾರು ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದರು. ಮೃತರು ಪತ್ನಿ, ಓರ್ವ ಪುತ್ರ ಮತ್ತು ಪುತ್ರಿಯರನ್ನು ಅಗಲಿದ್ದಾರೆ. ಅಲ್ಲದೆ ಹಲವಾರು ಮಂದಿ ರವಿ ಶೆಟ್ಟಿ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

ಬಂಟ್ವಾಳ: ಲಾವಣ್ಯ ಕೊಲೆ ಪ್ರಕರಣಕ್ಕೆ ಬಿಗ್ ಬ್ರೇಕ್: ಚೇತನ್ ಗೌಡ ಬಂಧನ..!

error: Content is protected !!