ಜನ ಮನದ ನಾಡಿ ಮಿಡಿತ

Advertisement

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ನಡೆದ ಗುಂಡಿನ ದಾಳಿಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.

ಬಾರ್ಕೂರು-ಕಚ್ಚೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್ ಹತ್ಯೆಗೀಡಾದವರು. ಕುಂದಾಪುರದ ಚರ್ಚ್ ರಸ್ತೆಯ ಹೋಲಿ ರೋಸರಿ ಚರ್ಚ್ ಎದುರು ಮುಂಜಾನೆ ಸುಮಾರು 3.30ರ ವೇಳೆಗೆ ಈ ಘಟನೆ ನಡೆದಿದೆ. ಐವನ್ ರಿಚರ್ಡ್ ಅವರು ಮಹಿಳೆಯೊಬ್ಬರೊಂದಿಗೆ ಕಾರಿನಲ್ಲಿ ಸ್ಥಳಕ್ಕೆ ಬಂದಿದ್ದ ವೇಳೆ, ಅಪರಿಚಿತ ವ್ಯಕ್ತಿಯೊಬ್ಬ ಪಿಸ್ತೂಲ್‌ನಿಂದ ಗುಂಡಿನ ದಾಳಿ ನಡೆಸಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡ ಐವನ್ ರಿಚರ್ಡ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಬಳಿಕ ಆರೋಪಿ ಪರಾರಿಯಾಗಿದ್ದು, ಮೃತರೊಂದಿಗೆ ಇದ್ದ ಮಹಿಳೆ ಆರೋಪಿಯನ್ನು ಗುರುತಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಐವನ್ ರಿಚರ್ಡ್ ಅವರು ವಿವಿಧ ವ್ಯವಹಾರಗಳಲ್ಲಿ ತೊಡಗಿಸಿಕೊಂಡಿದ್ದು, ತಮ್ಮ ಮೊದಲ ಪತ್ನಿಯಿಂದ ದೂರವಾಗಿ ಬಾರ್ಕೂರು ಮೂಲದ ಮಹಿಳೆಯೊಂದಿಗೆ ವಾಸಿಸುತ್ತಿದ್ದರು ಎನ್ನಲಾಗಿದೆ. ಆದರೆ, ಈ ಹತ್ಯೆಗೆ ನಿಖರ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕುಂದಾಪುರ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು, ಸೊಕೋ ತಂಡ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪರಾರಿಯಾಗಿರುವ ಆರೋಪಿಯ ಪತ್ತೆಗೆ ವಿಶೇಷ ಕಾರ್ಯಾಚರಣೆ ಆರಂಭಿಸಲಾಗಿದೆ. ಈ ಸಂಬಂಧ ಕುಂದಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹತ್ಯೆಯ ಹಿಂದಿನ ಉದ್ದೇಶ ಹಾಗೂ ಆರೋಪಿಯ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!