ಜನ ಮನದ ನಾಡಿ ಮಿಡಿತ

Advertisement

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ ಜನತೆ ಎಂದಿಗೂ ಮರೆಯಬಾರದು ಎಂದು ತುಳುಕೂಟ ಉಡುಪಿ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು.

ರೇಡಿಯೋ ಮಣಿಪಾಲ ಸಮುದಾಯ ಬಾನುಲಿ ಕೇಂದ್ರ ಹಾಗೂ ತುಳುಕೂಟ ಉಡುಪಿ ಸಹಯೋಗದಲ್ಲಿ ಉಡುಪಿಯ ಮುಕುಂದ ಕೃಪಾ ಶಾಲೆಯಲ್ಲಿ ಗುರುವಾರ ಆಯೋಜಿಸಿದ್ದ ನಾಡೋಜ ಕಯ್ಯಾರ ಕಿಞ್ಞಣ್ಣ ರೈ ನೆನಪಿನ ‘ಕಿನ್ಯ ಜೋಕ್ಲೆಡ್ದ್ ಸೊರ ಸಂಪು’ ಕಾರ್ಯಕ್ರಮವನ್ನು ಅವರು ಕಯ್ಯಾರ ಕಿಞ್ಞಣ್ಣ ರೈ ಅವರ ಪದ್ಯ ಹಾಡುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಕರ್ನಾಟಕದ ಮಹಾಕವಿ, ಹಿರಿಯ ಸಾಹಿತಿ, ಬಹುಭಾಷಾ ವಿದ್ವಾಂಸ, ಸ್ವಾತಂತ್ರ್ಯ ಹೋರಾಟಗಾರ ಹಾಗೂ ಕರ್ನಾಟಕ ಏಕೀಕರಣ ಚಳವಳಿಯ ಮುಂಚೂಣಿ ನಾಯಕರಾಗಿದ್ದ ಕಯ್ಯಾರ ಕಿಞ್ಞಣ್ಣ ರೈ ಅವರು ಕನ್ನಡ ಮತ್ತು ತುಳು ಭಾಷೆಗಳಿಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.


ತುಳು ಭಾಷೆಯ ಉಳಿವಿಗಾಗಿ ಶಾಲಾ ಮಕ್ಕಳಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಉಡುಪಿ ಜಿಲ್ಲೆಯ ವಿವಿಧ ಶಾಲೆಗಳಲ್ಲಿ ಆಯೋಜಿಸಲು ತುಳುಕೂಟ ಉಡುಪಿ ಹಾಗೂ ರೇಡಿಯೋ ಮಣಿಪಾಲ ಯೋಜನೆ ರೂಪಿಸಿವೆ. ಅದರ ಅಂಗವಾಗಿ ಮುಕುಂದ ಕೃಪಾ ಶಾಲೆಯಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ತುಳುಕೂಟದ ಉಪಾಧ್ಯಕ್ಷ ಹಾಗೂ ಕಯ್ಯಾರ ಕಿಞ್ಞಣ್ಣ ರೈ ಅವರ ಅಳಿಯ ಭುವನ ಪ್ರಸಾದ್ ಹೆಗ್ಡೆ, ಗೌರವ ಸಲಹೆಗಾರ ವಿಶ್ವನಾಥ ಶೆಣೈ, ರೇಡಿಯೋ ಮಣಿಪಾಲ ಕಾರ್ಯಕ್ರಮ ಸಂಯೋಜಕಿ ಡಾ. ರಶ್ಮಿ ಅಮ್ಮೆಂಬಳ, ಮುಕುಂದ ಕೃಪಾ ಶಾಲೆಯ ಪ್ರಾಂಶುಪಾಲೆ ವಿನುತಾ ಎಸ್. ನಾಯಕ್ ಮಾತನಾಡಿದರು.

ಕಾರ್ಯಕ್ರಮದ ಸಂಚಾಲಕಿ ವಿದ್ಯಾ ಸರಸ್ವತಿ ಪ್ರಾಸ್ತಾವಿಕವಾಗಿ ಮಾತನಾಡಿ, ತುಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಶಾಲಾ ಮಕ್ಕಳಲ್ಲಿ ಅರಿವು ಮೂಡಿಸುವುದು ಅಗತ್ಯ ಎಂದು ತಿಳಿಸಿದರು. ಪ್ರಭಾವತಿ ವಿಶ್ವನಾಥ್ ಸ್ವಾಗತಿಸಿದರು. ಗಂಗಾಧರ ಕಿದಿಯೂರು ವಂದಿಸಿದರು. ಯಶೋದಾ ಕೇಶವ್ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಮಕ್ಕಳು ತುಳು ಕಥೆ, ಗಾದೆ, ಕವಿತೆ ಹಾಗೂ ಪದ್ಯಗಳನ್ನು ಪ್ರಸ್ತುತಪಡಿಸಿ ಗಮನ ಸೆಳೆದರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

error: Content is protected !!