ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.

ಮಂಗಳೂರು ನಗರದಲ್ಲಿನ 28 ಪ್ರಮುಖ ಜಂಕ್ಷನ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಕ್ಯಾಮರಾಗಳು ವಾಹನ ದಟ್ಟಣೆಗೆ ಅನುಗುಣವಾಗಿ ಸಿಗ್ನಲ್‌ಗಳನ್ನು ಸ್ವಯಂಚಾಲಿತವಾಗಿ ನಿಯಂತ್ರಿಸುವ ಮೂಲಕ ಸಂಚಾರ ಸುಗಮಗೊಳಿಸುತ್ತಿವೆ. ಇದಲ್ಲದೆ ಸಂಚಾರಿ ಪೊಲೀಸ್ ಇಲಾಖೆಯು ವಿವಿಧ ಸ್ಥಳಗಳಲ್ಲಿ ಹೆಚ್ಚುವರಿ ಸಿಸಿ ಕ್ಯಾಮರಾಗಳನ್ನು ಅಳವಡಿಸಿದ್ದು, ಸಂಚಾರ ನಿಯಮ ಉಲ್ಲಂಘನೆ, ಅಪಘಾತ ತಡೆ ಹಾಗೂ ಅಪರಾಧ ತನಿಖೆಗೆ ಈ ವ್ಯವಸ್ಥೆ ಪರಿಣಾಮಕಾರಿಯಾಗಿ ನೆರವಾಗುತ್ತಿದೆ.

ದರೋಡೆ, ಕೊಲೆ ಸೇರಿದಂತೆ ಹಲವು ಪ್ರಕರಣಗಳ ಆರೋಪಿಗಳನ್ನು ಪತ್ತೆಹಚ್ಚುವಲ್ಲೂ ಕ್ಯಾಮರಾಗಳು ಪ್ರಮುಖ ಪಾತ್ರ ವಹಿಸಿವೆ. ಮಂಗಳೂರು ನಗರದಲ್ಲಿ ಇನ್ನು ಮುಂದೆ ಮಿತಿ ಮೀರಿದ ವೇಗದಿಂದ ವಾಹನ ಚಾಲನೆಗೂ ದಂಡ ವಿಧಿಸಲಾಗುವುದು. ಎಐ ಕ್ಯಾಮರಾಗಳ ಮೂಲಕ ವೇಗ ಉಲ್ಲಂಘನೆ ಪತ್ತೆ ಮಾಡಿ ಪ್ರಕರಣ ದಾಖಲಿಸಲಾಗುತ್ತಿದ್ದು, ‘ಇ-ವಾಹನ’ ವ್ಯವಸ್ಥೆ ಜಾರಿಯಾದ ಹಿನ್ನೆಲೆಯಲ್ಲಿ ಹೊರರಾಜ್ಯದ ವಾಹನಗಳಿಗೂ ನೋಟಿಸ್ ಜಾರಿಗೊಳಿಸಿ ದಂಡ ವಸೂಲಿ ಮಾಡಬಹುದಾಗಿದೆ. ಮಂಗಳೂರು ನಗರ ವ್ಯಾಪ್ತಿಯ ಎಲ್ಲಾ ಸಿಸಿ ಕ್ಯಾಮರಾಗಳು ಸುಸ್ಥಿತಿಯಲ್ಲಿದ್ದು, ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ನಿರಂತರವಾಗಿ ದಾಖಲಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ವೇಗ ಮಿತಿ ಉಲ್ಲಂಘನೆ ವಿರುದ್ಧವೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಂಚಾರ ವಿಭಾಗದ ಡಿಸಿಪಿ ರವಿಶಂಕರ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!