ಜನ ಮನದ ನಾಡಿ ಮಿಡಿತ

Advertisement

ಕೊಪ್ಪಳ: ಕೊಪ್ಪಳದಲ್ಲಿ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರ ಆಕ್ರೋಶ; ದಬ್ಬಾಳಿಕೆ, ಮರಗಳ ನಾಶ ಆರೋಪ…!

ಜಿಲ್ಲೆಯ ಯಲಬುರ್ಗಾ, ಕುಷ್ಟಗಿ ಹಾಗೂ ಕೊಪ್ಪಳ ತಾಲೂಕಿನ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರು ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ರೈತರ ಜಮೀನಿನಲ್ಲಿ ದಬ್ಬಾಳಿಕೆ ನಡೆಸುವುದು, ಸೂಕ್ತ ಪರಿಹಾರ ನೀಡದೆ ವಿಂಡ್ ಟರ್ಬೈನ್ ರೆಕ್ಕೆಗಳನ್ನು ಸಾಗಿಸುವುದು ಹಾಗೂ ರಸ್ತೆ ನಿರ್ಮಾಣದ ಹೆಸರಿನಲ್ಲಿ ಮರ-ಗಿಡಗಳನ್ನು ನಾಶಪಡಿಸಲಾಗುತ್ತಿದೆ ಎಂದು ಅವರು ದೂರಿದ್ದಾರೆ. ವಿಂಡ್ ಮಿಲ್ ಕಂಪನಿ ಸಿಬ್ಬಂದಿ ರೈತರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. “ನಿನ್ನ ಜಮೀನಿದ್ರೆ ಮಾತಾಡು, ಇಲ್ಲದಿದ್ದರೆ ಇಲ್ಲಿಂದ ಹೋಗು” ಎಂಬ ರೀತಿಯ ಬೆದರಿಕೆ ಮಾತುಗಳಿರುವ ವಿಡಿಯೊಗಳನ್ನು ಅಧಿಕಾರಿಗಳಿಗೆ ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೃಹತ್ ಗಾತ್ರದ ವಿಂಡ್ ಟರ್ಬೈನ್ ರೆಕ್ಕೆಗಳನ್ನು ಸಾಗಿಸಲು ರಸ್ತೆಬದಿಯ ಮರಗಳು ಹಾಗೂ ಗಿಡಗಳನ್ನು ಜೆಸಿಬಿ ಮೂಲಕ ತೆರವುಗೊಳಿಸಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ರಾತ್ರಿ ವೇಳೆ ರಸ್ತೆ ನಿರ್ಮಾಣದ ಹೆಸರಿನಲ್ಲಿ ವೃಕ್ಷಸಂಪತ್ತಿಗೆ ಹಾನಿ ಮಾಡಲಾಗುತ್ತಿದೆ ಎನ್ನಲಾಗಿದೆ. ಈ ಕುರಿತು ಹಲವು ಬಾರಿ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ರೈತರು ಆರೋಪಿಸಿದ್ದಾರೆ. ಕೆಲ ಸ್ಥಳೀಯ ಜನಪ್ರತಿನಿಧಿಗಳ ಬೆಂಬಲದಿಂದ ಕಂಪನಿಗಳು ನಿರ್ಭಯವಾಗಿ ಕಾರ್ಯನಿರ್ವಹಿಸುತ್ತಿವೆ ಎಂಬ ಆರೋಪವೂ ಕೇಳಿಬಂದಿದೆ. ಯಲಬುರ್ಗಾ ತಾಲೂಕಿನ ಬುಕ್ಕನಟ್ಟಿ ಗ್ರಾಮದ ಸರ್ವೇ ನಂ. 64, ಹಿರೇಬೊಮ್ಮನಾಳ ಹಾಗೂ ಗುನ್ನಾಳ ರಸ್ತೆ ಭಾಗಗಳಲ್ಲಿ ಮರಗಳನ್ನು ತೆರವುಗೊಳಿಸಿ, ರೈತರ ಜಮೀನಿನಲ್ಲಿ ದಬ್ಬಾಳಿಕೆಯಿಂದ ವಿಂಡ್ ಮಿಲ್ ಅಳವಡಿಕೆ ನಡೆಯುತ್ತಿದೆ ಎಂದು ರೈತರು ದೂರಿದ್ದಾರೆ. ಸಚಿವ ಶಿವರಾಜ್ ತಂಗಡಗಿ ಹಾಗೂ ಯಲಬುರ್ಗಾ ಕ್ಷೇತ್ರದ ಶಾಸಕ ಬಸವರಾಜ್ ರಾಯರೆಡ್ಡಿ ಅವರು ಮಧ್ಯಪ್ರವೇಶಿಸಿ ಪ್ರಕರಣದ ತನಿಖೆ ನಡೆಸಬೇಕು. ವಿಂಡ್ ಮಿಲ್ ಕಂಪನಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಪರಿಸರ ಮತ್ತು ರೈತರ ಹಿತಾಸಕ್ತಿಯನ್ನು ಕಾಪಾಡಬೇಕು ಎಂದು ರೈತರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!