ಜನ ಮನದ ನಾಡಿ ಮಿಡಿತ

Advertisement

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬೀದಿ ನಾಯಿಗಳ ದಾಳಿಯಿಂದ ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ.

ಲಕ್ಷ್ಮೇಶ್ವರ ಪಟ್ಟಣದ ವಾರ್ಡ್ ನಂ. 5ರ ಮಕಾನ ಓಣಿಯಲ್ಲಿ ಚಿಪ್ಸ್ ತರಲು ಅಂಗಡಿಗೆ ತೆರಳುತ್ತಿದ್ದ ಬಾಲಕಿ ರಾಹಾ ಗಾಡಿವಾಲೆ ಮೇಲೆ ಬೀದಿ ನಾಯಿಗಳು ಏಕಾಏಕಿ ದಾಳಿ ಮಾಡಿವೆ. ನಾಯಿಗಳ ದಾಳಿಯಿಂದ ಬಾಲಕಿಯ ತಲೆಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಸ್ಥಳೀಯರು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಗಾಯಗೊಂಡ ಬಾಲಕಿಗೆ ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಇತ್ತೀಚೆಗೆ ಇದೇ ರೀತಿಯಲ್ಲಿ ಮತ್ತೊಂದು ಮಗುವಿನ ಮೇಲೆ ಬೀದಿ ನಾಯಿಗಳು ದಾಳಿ ಮಾಡಿದ್ದ ಘಟನೆ ನಡೆದಿತ್ತು. ಅದರ ಬೆನ್ನಲ್ಲೇ ಮತ್ತೊಂದು ದಾಳಿ ನಡೆದಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಲಕ್ಷ್ಮೇಶ್ವರ ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಈ ಕುರಿತು ಪುರಸಭೆಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!