ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

ನಿರಂತರ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ–169ರ ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಮತ್ತೆ ಭೂಕುಸಿತ ಆರಂಭವಾಗಿದೆ. ಗುಡ್ಡದಿಂದ ಮಣ್ಣು ಹಾಗೂ ಬೃಹತ್ ಬಂಡೆಕಲ್ಲುಗಳು ಜಾರಲಾರಂಭಿಸಿದ್ದು, ವಾಹನ ಸವಾರರು ಹಾಗೂ ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿದೆ.

ತಿರುವೈಲು ಸರ್ಕಾರಿ ಶಾಲೆ ಸಮೀಪದ ಕೆತ್ತಿಕಲ್ ಗುಡ್ಡದಲ್ಲಿ ಮಂಗಳವಾರ ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿಯತೊಡಗಿದೆ. ಹಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಗುಡ್ಡದ ಮಣ್ಣು ಸಡಿಲಗೊಂಡಿದ್ದು, ಮುಂದಿನ ದಿನಗಳಲ್ಲಿ ಕುಸಿತದ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಗುಡ್ಡದ ಸುರಕ್ಷತೆಗಾಗಿ ಹೆದ್ದಾರಿ ಗುತ್ತಿಗೆ ಸಂಸ್ಥೆ ಕಳೆದ ಒಂದು ತಿಂಗಳಿನಿಂದ ತಳಭಾಗದಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಸುತ್ತಿದೆ. ಆದರೆ ಭಾರೀ ಮಳೆಯ ಸಂದರ್ಭದಲ್ಲಿ ಇಂತಹ ತಡೆಗೋಡೆಗಳು ಸಾಕಷ್ಟು ಪರಿಣಾಮಕಾರಿಯಾಗುವುದಿಲ್ಲ ಎಂಬ ಆತಂಕವನ್ನು ಸ್ಥಳೀಯರು ಮೊದಲಿನಿಂದಲೇ ವ್ಯಕ್ತಪಡಿಸಿದ್ದರು. ಕಳೆದ ವರ್ಷ ಇದೇ ಪ್ರದೇಶದಲ್ಲಿ ಸಂಭವಿಸಿದ್ದ ಭೂಕುಸಿತದ ಬಳಿಕ ಗುಡ್ಡವನ್ನು ಸುರಕ್ಷಿತಗೊಳಿಸುವ ಉದ್ದೇಶದಿಂದ ಸಿಮೆಂಟ್ ಹೊದಿಕೆ ಅಳವಡಿಸಿ, ಮಳೆ ನೀರು ಒಳನುಗ್ಗದಂತೆ ಡ್ರೈನೇಜ್ ಕೊಳವೆಗಳ ವ್ಯವಸ್ಥೆ ಮಾಡಲಾಗಿತ್ತು. ಆದರೆ ಕಳೆದ ವರ್ಷದ ಭಾರೀ ಮಳೆಗೆ ಆ ರಕ್ಷಣಾ ವ್ಯವಸ್ಥೆಯ ಬಹುಪಾಲು ಹಾನಿಗೊಳಗಾಗಿತ್ತು. ಪ್ರಸ್ತುತ ಗುಡ್ಡದ ಮೇಲ್ಭಾಗದಲ್ಲಿ ಇನ್ನೂ ಹಲವು ಬೃಹತ್ ಬಂಡೆಗಳು ಹಾಗೂ ದೊಡ್ಡ ಮರಗಳು ಅಪಾಯಕಾರಿ ಸ್ಥಿತಿಯಲ್ಲಿದ್ದು, ಮುಂದಿನ ದಿನಗಳಲ್ಲಿ ಮಳೆ ಮತ್ತಷ್ಟು ತೀವ್ರಗೊಂಡರೆ ಅವು ಹೆದ್ದಾರಿಗೆ ಜಾರುವ ಅಪಾಯವಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಕಳೆದ ವರ್ಷದ ಭೂಕುಸಿತದ ಬಳಿಕ ಈ ಭಾಗದಲ್ಲಿ ಚತುಷ್ಪಥದ ಬದಲಿಗೆ ಎರಡು ಪಥಗಳಲ್ಲಿ ಮಾತ್ರ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಇದೀಗ ಮತ್ತೆ ಗುಡ್ಡ ಕುಸಿತ ಆರಂಭವಾಗಿರುವುದರಿಂದ ಹೆದ್ದಾರಿಯ ಸುರಕ್ಷತೆ ಬಗ್ಗೆ ಪ್ರಶ್ನೆಗಳು ಉದ್ಭವಿಸಿವೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!