ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡು–ಅಡ್ಡಹೊಳೆ ಚತುಷ್ಪಥ ರಸ್ತೆ ಕಾಮಗಾರಿ ಬಹುತೇಕ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, ಗುತ್ತಿಗೆದಾರ ಸಂಸ್ಥೆಯಾದ ಕೆಎನ್‌ಆರ್‌ಸಿಎಲ್ ಕಂಪನಿಯು ಪಾಣೆಮಂಗಳೂರು ಹಳೆಯ ಸೇತುವೆ ಸಮೀಪ ಲೀಸ್ ಆಧಾರದಲ್ಲಿ ಬಳಸುತ್ತಿದ್ದ ಖಾಸಗಿ ಜಾಗವನ್ನು ತೆರವುಗೊಳಿಸಿದೆ.

ಈ ಬೆಳವಣಿಗೆಯಿಂದ ಸಾರ್ವಜನಿಕರಲ್ಲಿ ಕಾಮಗಾರಿ ಅರ್ಧದಲ್ಲೇ ಸ್ಥಗಿತಗೊಂಡಿದೆಯೇ ಎಂಬ ಅನುಮಾನಗಳು ಮೂಡಿದ್ದರೂ, ಅಂತಹ ಯಾವುದೇ ಆತಂಕಕ್ಕೆ ಅವಕಾಶ ಇಲ್ಲ ಎಂದು ಕಂಪನಿ ಸ್ಪಷ್ಟಪಡಿಸಿದೆ.

ಪಾಣೆಮಂಗಳೂರು ಪ್ಲಾಂಟ್‌ನಲ್ಲಿ ಇರಿಸಲಾಗಿದ್ದ ಬಹುತೇಕ ಯಂತ್ರೋಪಕರಣಗಳನ್ನು ಈಗಾಗಲೇ ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಯೋಜನೆಯ ಸುಮಾರು 95 ಶೇಕಡಾ ಕಾಮಗಾರಿ ಪೂರ್ಣಗೊಂಡಿರುವುದರಿಂದ ಅಗತ್ಯವಿಲ್ಲದ ಯಂತ್ರೋಪಕರಣಗಳನ್ನು ಹಿಂತೆಗೆದುಕೊಳ್ಳಲಾಗಿದೆ ಎಂದು ಸಂಸ್ಥೆ ತಿಳಿಸಿದೆ.

ಉಳಿದಿರುವ ಕಾಮಗಾರಿಗಳಿಗೆ ಅಗತ್ಯ ಸಿಬ್ಬಂದಿ ಹಾಗೂ ಯಂತ್ರೋಪಕರಣಗಳು ಉಪ್ಪಿನಂಗಡಿ ಸಮೀಪದ ಕಾಂಚನ ಮತ್ತು ನೆಕ್ಕಿಲಾಡಿ ಪ್ಲಾಂಟ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿವೆ.

ಚತುಷ್ಪಥ ಯೋಜನೆಗಾಗಿ ಕಂಪನಿಯು ಒಟ್ಟು ಮೂರು ಪ್ಲಾಂಟ್‌ಗಳನ್ನು ಸ್ಥಾಪಿಸಿತ್ತು. ಈಗಾಗಲೇ ಪೆರ್ನೆವರೆಗೆ ಮುಖ್ಯ ರಸ್ತೆ ಕಾಮಗಾರಿ ಪೂರ್ಣಗೊಂಡಿದ್ದು, ನೆಕ್ಕಿಲಾಡಿ ಸಮೀಪದ ಕಲ್ಲು ಬ್ಲಾಸ್ಟಿಂಗ್ ಪ್ರದೇಶದಲ್ಲಿ ಅಲ್ಪ ಪ್ರಮಾಣದ ಕಾಮಗಾರಿ ಮಾತ್ರ ಬಾಕಿಯಿದೆ.

ಇದರ ಜೊತೆಗೆ ಚರಂಡಿ ನಿರ್ಮಾಣ, ಸಂಪರ್ಕ ರಸ್ತೆಗಳ ಅಭಿವೃದ್ಧಿ ಸೇರಿದಂತೆ ಕೆಲವು ಸಣ್ಣಪುಟ್ಟ ಕಾಮಗಾರಿಗಳು ನಿತ್ಯವೂ ಮುಂದುವರಿಯುತ್ತಿದ್ದು, ಯೋಜನೆಯ ಅಂತಿಮ ಹಂತದ ಕಾರ್ಯಗಳು ವೇಗವಾಗಿ ಸಾಗುತ್ತಿವೆ ಎಂದು ಕೆಎನ್‌ಆರ್‌ಸಿಎಲ್ ಕಂಪನಿ ಮಾಹಿತಿ ನೀಡಿದೆ.

Leave a Reply

Your email address will not be published. Required fields are marked *

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

ಬೆಳ್ತಂಗಡಿ: ಪ್ರಚೋದನಾಕಾರಿ ಭಾಷಣ ಪ್ರಕರಣ; ಎಸ್ಟಿಪಿಐ ಮುಖಂಡನಿಗೆ 6 ತಿಂಗಳ ಜೈಲು ಶಿಕ್ಷೆ…!

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

ಕೊಪ್ಪಳ: ಕೊಪ್ಪಳದಲ್ಲಿ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರ ಆಕ್ರೋಶ; ದಬ್ಬಾಳಿಕೆ, ಮರಗಳ ನಾಶ ಆರೋಪ…!

error: Content is protected !!