ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಕದ್ರಿ ಬಂಜನ್‌ ಕ್ಷೇತ್ರದಲ್ಲಿ ನಿವೃತ್ತ ವೀರ ಯೋಧರು, ವೀರನಾರಿಯರಿಗೆ ಸನ್ಮಾನ…!

ಕದ್ರಿ ಬಂಜನ್ ಆದಿ ಮೂಲಸ್ಥಾನ ಶ್ರೀ ನಾಗಬ್ರಹ್ಮ ಕ್ಷೇತ್ರದ ವತಿಯಿಂದ ನಿವೃತ್ತ ವೀರ ಯೋಧರು ಹಾಗೂ ವೀರನಾರಿಯರನ್ನು ಗೌರವಿಸುವ ವಿಶೇಷ ಸನ್ಮಾನ ಕಾರ್ಯಕ್ರಮ ಕದ್ರಿ ಬಂಜನ್ ಚಾವಡಿಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮೈಸೂರು ಹಿಲ್‌ಸೈಡ್ ಆರ್ಕಿಟೆಕ್ಟ್‌ನ ವ್ಯವಸ್ಥಾಪಕ ನಿರ್ದೇಶಕ ರಾಧಾಕೃಷ್ಣ ಬಂಜನ್, ದೇಶದ ಭದ್ರತೆಗೆ ಪಾಕಿಸ್ತಾನ, ಚೀನಾ ಸೇರಿದಂತೆ ಬಾಹ್ಯ ಶಕ್ತಿಗಳಿಂದ ಮಾತ್ರವಲ್ಲದೆ, ದೇಶದೊಳಗಿನ ದೇಶದ್ರೋಹಿಗಳಿಂದಲೂ ಸವಾಲು ಎದುರಾಗುತ್ತಿದೆ ಎಂದು ಹೇಳಿದರು.

ಇಂತಹ ಸವಾಲುಗಳನ್ನು ನಿಯಂತ್ರಿಸುವುದು ಅತ್ಯಂತ ಕಷ್ಟದ ಕಾರ್ಯ. ಆದರೆ ದೇಶದ ಸೈನಿಕರು ಸಲ್ಲಿಸುತ್ತಿರುವ ನಿಸ್ವಾರ್ಥ ಸೇವೆ ಮತ್ತು ತ್ಯಾಗದಿಂದಾಗಿ ಕೋಟ್ಯಂತರ ಜನರು ಸುರಕ್ಷಿತವಾಗಿ ಬದುಕಲು ಸಾಧ್ಯವಾಗಿದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಬಿಎಸ್‌ಎಫ್‌ನ ನಿವೃತ್ತ ಕಮಾಂಡೆಂಟ್ ಡಿ. ಚಂದಪ್ಪ ಮೂಲ್ಯ, ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದ ಅಧ್ಯಕ್ಷ ಸುಂದರ್ ಕುಲಾಲ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!