ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಅಂಬಲಪಾಡಿ ಸಮೀಪದ ಬಿಆರ್ ಮೆಡೋಸ್ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ.

ಮೃತರನ್ನು ಉಡುಪಿಯ ಕಲ್ಪನಾ ಟಾಕೀಸ್ ಬಳಿಯ ಸಾಯಿರಾಜ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಚಿನ್ ಶೆಟ್ಟಿ ಎಂದು ಗುರುತಿಸಲಾಗಿದೆ.
ಸಚಿನ್ ಶೆಟ್ಟಿ ಅವರು ಕಳೆದ ನಾಲ್ಕು ವರ್ಷಗಳಿಂದ ಸೊಸೈಟಿಯಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಘಟನೆ ಕುರಿತು ಮಾಹಿತಿ ಪಡೆದ ಉಡುಪಿ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.



