ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಬಂಟ್ವಾಳ ಪುರಸಭೆಯ ಹೊಸ ಜೆಸಿಬಿಗೆ ತ್ಯಾಜ್ಯ ವಿಲೇವಾರಿ ಕಾರ್ಯಕ್ಕೆ ಚಾಲನೆ

ಬಂಟ್ವಾಳ ಪುರಸಭೆಯಲ್ಲಿ ಬಳಕೆಗೆ ಬಾರದೆ ಬಾಕಿಯಾಗಿದ್ದ ಹೊಸ ಜೆಸಿಬಿ ಇದೀಗ ಪುರಸಭೆ ಮುಖ್ಯಾಧಿಕಾರಿ ತೀರ್ಥಪ್ರಸಾದ್ ಅವರ ಮುತುವರ್ಜಿಯಿಂದ ಕಂಚಿನಡ್ಕ ಪದವಿನ ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ತೆರಳಿದ್ದು, ತ್ಯಾಜ್ಯ ವಿಲೇವಾರಿ ಕಾರ್ಯಕ್ಕೆ ಅಧಿಕೃತ ಚಾಲನೆ ನೀಡಲಾಗಿದೆ.

ಕಂಚಿನಡ್ಕ ಪದವಿನ ತ್ಯಾಜ್ಯ ಸಂಸ್ಕರಣಾ ಘಟಕದ ಆವರಣದಲ್ಲಿ ತ್ಯಾಜ್ಯದ ರಾಶಿ ಸಂಗ್ರಹವಾಗಿದ್ದು, ಮಳೆಗಾಲದ ಹಿನ್ನೆಲೆಯಲ್ಲಿ ವಿಲೇವಾರಿ ಕಾರ್ಯಕ್ಕೆ ಕೆಲವೊಂದು ಅಡಚಣೆಗಳು ಎದುರಾಗಿವೆ. ಮಳೆ ಕಡಿಮೆಯಾದ ಕೂಡಲೇ ತ್ಯಾಜ್ಯ ವಿಲೇವಾರಿ ಕಾರ್ಯವನ್ನು ಚುರುಕುಗೊಳಿಸುವುದಾಗಿ ಮುಖ್ಯಾಧಿಕಾರಿ ತೀರ್ಥಪ್ರಸಾದ್ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ವಾರದಲ್ಲಿ ಕನಿಷ್ಠ ಮೂರು ಬಾರಿ ಘಟಕಕ್ಕೆ ಖುದ್ದಾಗಿ ಭೇಟಿ ನೀಡಿ ತ್ಯಾಜ್ಯ ವಿಲೇವಾರಿ ವ್ಯವಸ್ಥೆಯನ್ನು ಪರಿಶೀಲಿಸಲಾಗುವುದು. ಅಗತ್ಯ ಕ್ರಮಗಳನ್ನು ಕೈಗೊಂಡು ಮುಂದಿನ ಮೂರು ತಿಂಗಳಲ್ಲಿ ಇಲ್ಲಿನ ಸಮಸ್ಯೆಗಳನ್ನು ಹಂತಹಂತವಾಗಿ ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು.

ಅಗತ್ಯವಿದ್ದಲ್ಲಿ ದಿನಗೂಲಿ ನೌಕರರನ್ನು ನೇಮಕ ಮಾಡಿಕೊಂಡು ತ್ಯಾಜ್ಯ ವಿಲೇವಾರಿ ಕಾರ್ಯವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಹೊಸ ಜೆಸಿಬಿ ಬಳಕೆಗೆ ಬಂದಿರುವುದರಿಂದ ಘಟಕದಲ್ಲಿರುವ ತ್ಯಾಜ್ಯವನ್ನು ತೆರವುಗೊಳಿಸುವ ಕಾರ್ಯಕ್ಕೆ ವೇಗ ದೊರೆಯುವ ನಿರೀಕ್ಷೆ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಶಾಲಾ ಬಸ್; ತಪ್ಪಿದ ಭಾರೀ ಅನಾಹುತ

ಮಂಗಳೂರು: ತಲಪಾಡಿಯಲ್ಲಿ ಪಾದಚಾರಿಗೆ ಕಾರು ಡಿಕ್ಕಿ; ಗಂಭೀರ ಗಾಯ

ಪರ್ಕಳ: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬುಲೆಟ್; ಯುವಕ ಸಾವು

ವಾಮದಪದವು: ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ…!

ಮಂಗಳೂರು: ಪುದು ಗ್ರಾಮ ಪಂಚಾಯಿತಿಯಲ್ಲಿ ವಿಶಿಷ್ಟ ‘ಆಟಿಡೊಂಜಿ ದಿನ’ ಆಚರಣೆ

ಉಡುಪಿ: ಅಪಾರ್ಟ್‌ಮೆಂಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ

error: Content is protected !!